ಜನರ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರದ ಭರವಸೆ ನೀಡಿದ ಸಚಿವ ಆರ್. ಅಶೋಕ್ - minister R Ashok visits to hubli
'ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆಗೆ' ಕಾರ್ಯಕ್ರಮದಡಿ ಸಚಿವ ಆರ್. ಅಶೋಕ್ ಹುಬ್ಬಳ್ಳಿಯ ಛಬ್ಬಿ ಗ್ರಾಮದಲ್ಲಿ ವಾಸ್ತವ್ಯ ಹೂಡಿದ್ದಾರೆ. ಇದೇ ವೇಳೆ ಛಬ್ಬಿ ಗ್ರಾಮದ ಸಿದ್ಧಾರೂಢರ ಮಠಕ್ಕೆ ಭೇಟಿ ನೀಡಿ ದರ್ಶನ ಪಡೆದಿದ್ದಾರೆ.
ಛಬ್ಬಿ ಗ್ರಾಮದಲ್ಲಿ ವಾಸ್ತವ್ಯ
ಹುಬ್ಬಳ್ಳಿ: ಹುಬ್ಬಳ್ಳಿ ತಾಲೂಕಿನ ಛಬ್ಬಿ ಗ್ರಾಮಕ್ಕೆ 'ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆಗೆ' ಕಾರ್ಯಕ್ರಮಕ್ಕೆ ಆಗಮಿಸಿದ ಕಂದಾಯ ಸಚಿವ ಆರ್.ಅಶೋಕ್, ಗ್ರಾಮದ ಸಿದ್ಧಾರೂಢರ ಮಠಕ್ಕೆ ಭೇಟಿ ನೀಡಿ ದರ್ಶನ ಪಡೆದರು.