ಕರ್ನಾಟಕ

karnataka

ETV Bharat / state

ಬೋಗೂರು ಅತ್ಯಾಚಾರ ಸಂತ್ರಸ್ತೆ ಕುಟುಂಬಕ್ಕೆ 50 ಸಾವಿರ ಪರಿಹಾರ ನೀಡಿದ ಸಚಿವ ಶೆಟ್ಟರ್ - Bogoru rape victim

ಬೋಗೂರು ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಆತ್ಮಹತ್ಯೆ ಮಾಡಿಕೊಂಡ ಬಾಲಕಿ ಕುಟುಂಬಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಭೇಟಿ ನೀಡಿ, ವೈಯಕ್ತಿಕವಾಗಿ 50 ಸಾವಿರ ರೂಪಾಯಿ ಪರಿಹಾರ ನೀಡಿದರು.

Minister Jagadish Shettar news ಸಚಿವ ಜಗದೀಶ್ ಶೆಟ್ಟರ್ ಸುದ್ದಿ
Minister Jagadish Shettar news ಸಚಿವ ಜಗದೀಶ್ ಶೆಟ್ಟರ್ ಸುದ್ದಿ

By

Published : Aug 9, 2020, 9:14 PM IST

ಧಾರವಾಡ: ತಾಲೂಕಿನ ಬೋಗೂರು ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಆತ್ಮಹತ್ಯೆ ಮಾಡಿಕೊಂಡ ಬಾಲಕಿ ಕುಟುಂಬಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಸ್ಥಳದಲ್ಲೇ ವೈಯಕ್ತಿಕವಾಗಿ 50 ಸಾವಿರ ರೂ. ಪರಿಹಾರ ನೀಡಿದರು.

ಬೋಗೂರು ಅತ್ಯಾಚಾರ ಸಂತ್ರಸ್ತೆ ಮನೆಗೆ ಸಚಿವ ಶೆಟ್ಟರ್

ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ, ಕುಟುಂಬದ ಸದಸ್ಯರಿಗೆ ಸೂಕ್ತ ಭದ್ರತೆ ನೀಡಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು. ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಹೆಚ್ಚಿನ ಪರಿಹಾರ ಕೊಡಿಸುವುದಾಗಿ ಭರವಸೆ ನೀಡಿದರು.

ಬಿಜೆಪಿ ಜಿಲ್ಲಾ ಅಧ್ಯಕ್ಷ ಬಸವರಾಜ ಕುಂದಗೋಳಮಠ, ಮಾಜಿ ಮೇಯರ್ ಶಿವು ಹಿರೇಮಠ, ಮಲ್ಲಿಕಾರ್ಜುನ ಸಾಹುಕಾರ್, ಸಂತೋಷ್ ಚೌಹಾಣ, ಶಿವಾನಂದ ದೇಶನೂರ ಇದ್ದರು.

ABOUT THE AUTHOR

...view details