ಹುಬ್ಬಳ್ಳಿ:ಪ್ರಧಾನಮಂತ್ರಿಯವರು ವಿಸ್ತರಿಸಿರುವ ಲಾಕ್ಡೌನ್ ಆದೇಶವನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು ಎಂದು ಸಚಿವ ಜಗದೀಶ್ ಶೆಟ್ಟರ್ ಮನವಿ ಮಾಡಿದರು.
ಲಾಕ್ಡೌನ್ ಕಟ್ಟುನಿಟ್ಟಾಗಿ ಪಾಲಿಸುವಂತೆ ಸಚಿವ ಶೆಟ್ಟರ್ ಮನವಿ - ಮೇ 3ರ ವರೆಗೂ ಲಾಕ್ಡೌನ್
ದೇಶದ ನಾಗರಿಕರ ಆರೋಗ್ಯದ ಹಿತದೃಷ್ಟಿಯಿಂದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಘೋಷಣೆ ಮಾಡಿರುವ ಲಾಕ್ಡೌನ್ ಆದೇಶವನ್ನು ಎಲ್ಲರೂ ಕೂಡ ಪಾಲಿಸುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಸಚಿವ ಜಗದೀಶ್ ಶೆಟ್ಟರ್ ಮನವಿ ಮಾಡಿದರು.
ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ಕೊರೊನಾ ವೈರಸ್ ಭೀತಿಯ ಹಿನ್ನೆಲೆ ಮೇ 3ರವರೆಗೂ ಲಾಕ್ಡೌನ್ ಜಾರಿಯಾಗಿದೆ. ದೇಶದ ನಾಗರಿಕರ ಆರೋಗ್ಯದ ಹಿತದೃಷ್ಟಿಯಿಂದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಘೋಷಣೆ ಮಾಡಿರುವ ಲಾಕ್ಡೌನ್ ಆದೇಶವನ್ನು ಎಲ್ಲರೂ ಕೂಡ ಪಾಲಿಸುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಬೇಕು. ದೇಶಾದ್ಯಂತ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಹರಡುವಿಕೆ ಹೆಚ್ಚಾಗಿದೆ. ಸಾವಿನ ಸಂಖ್ಯೆ ಕೂಡ ಅಧಿಕವಾಗುತ್ತಿದೆ. ಪ್ರಪಂಚದ ಅಂಕಿ-ಅಂಶಗಳನ್ನು ಗಮನಿಸಿದರೆ ಭಾರತ ಸ್ವಲ್ಪ ನಿಯಂತ್ರಣದಲ್ಲಿದೆ ಎಂದರು.
ಈಗಾಗಲೇ ಕೃಷಿ ಚಟುವಟಿಕೆಗಳಿಗೆ ಸರ್ಕಾರ ವಿನಾಯಿತಿ ನೀಡಿದೆ. ಕೈಗಾರಿಕೆಗಳ ಕುರಿತು ಕೂಡ ಕೇಂದ್ರ ಸಚಿವರ ಜೊತೆಗೆ ಸಮಾಲೋಚನೆ ನಡೆಸಲಾಗಿದೆ. ಸಾರ್ವಜನಿಕರು ಪ್ರಧಾನಮಂತ್ರಿಯವರ ಆದೇಶವನ್ನು ಪಾಲಿಸುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದರು.