ಹುಬ್ಬಳ್ಳಿ: ಉಕ್ರೇನ್ನಲ್ಲಿ ಸಿಲುಕಿರುವ ಪ್ರತಿಯೊಬ್ಬ ಭಾರತೀಯರು ಸುರಕ್ಷಿತವಾಗಿ ಬರಬೇಕು. ದುರಾದೃಷ್ಟವಶಾತ್ ಹಾವೇರಿ ಜಿಲ್ಲೆಯ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಉಕ್ರೇನ್ನಲ್ಲಿ ಕಡಿಮೆ ಖರ್ಚಿನಲ್ಲಿ ವೈದ್ಯಕೀಯ ಶಿಕ್ಷಣ ಸಿಗುತ್ತದೆ. ಆದರೆ, ನಮ್ಮ ದೇಶದಲ್ಲಿ ಯಾಕೆ ಇದು ಸಾಧ್ಯವಾಗುತ್ತಿಲ್ಲ ಎಂದು ಕಾರ್ಮಿಕ ಇಲಾಖೆ ಸಚಿವ ಶಿವರಾಮ್ ಹೆಬ್ಬಾರ್ ಬೇಸರ ವ್ಯಕ್ತಪಡಿಸಿದರು.
ಕಡಿಮೆ ಖರ್ಚಿನಲ್ಲಿ ವೈದ್ಯಕೀಯ ಶಿಕ್ಷಣ ನೀಡಲು ನಮ್ಮಲ್ಲಿ ಏಕೆ ಸಾಧ್ಯವಾಗುತ್ತಿಲ್ಲ?: ಶಿವರಾಮ್ ಹೆಬ್ಬಾರ್ - Minister Shivaram Hebbar
ಮಧ್ಯಮ ವರ್ಗದ ಪೋಷಕರಿಗೆ ಕೋಟ್ಯಂತರ ರೂ. ಖರ್ಚು ಮಾಡಿ ಓದಿಸುವ ಶಕ್ತಿ ಇಲ್ಲ. ಹಾಗಾಗಿ, ಉಕ್ರೇನ್ನಲ್ಲಿ ಎಂಬಿಬಿಎಸ್ ಹಾಗೂ ಎಂಡಿ ವ್ಯಾಸಂಗ ಮಾಡಲು ಹೋಗುತ್ತಿದ್ದಾರೆ. ಕಡಿಮೆ ಖರ್ಚಿನಲ್ಲಿ ವೈದ್ಯಕೀಯ ಶಿಕ್ಷಣ ನಮ್ಮಲ್ಲಿ ಏಕೆ ಸಾಧ್ಯವಾಗುತ್ತಿಲ್ಲ ಎಂದು ಸಚಿವ ಶಿವರಾಮ್ ಹೆಬ್ಬಾರ್ ಬೇಸರ ವ್ಯಕ್ತಪಡಿಸಿದರು.
ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಶಿವರಾಮ್ ಹೆಬ್ಬಾರ್
ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮಧ್ಯಮ ವರ್ಗದ ಪೋಷಕರಿಗೆ ಕೋಟ್ಯಂತರ ರೂ. ಖರ್ಚು ಮಾಡಿ ಓದಿಸುವ ಶಕ್ತಿ ಇಲ್ಲ. ಹಾಗಾಗಿ ಉಕ್ರೇನ್ನಲ್ಲಿ ಎಂಬಿಬಿಎಸ್ ಹಾಗೂ ಎಂಡಿ ವ್ಯಾಸಂಗ ಮಾಡಲು ಹೋಗುತ್ತಿದ್ದಾರೆ. ಇದು ಯಾಕೆ ನಮ್ಮ ದೇಶದಲ್ಲಿ ಸಾಧ್ಯವಾಗುತ್ತಿಲ್ಲ ಎಂಬುದು ಪಾಲಕರ ಪ್ರಶ್ನೆ ಎಂದರು.
ನೀಟ್ ಬ್ಯಾನ್ ಮಾಡುವಂತೆ ಟ್ವಿಟರ್ ಅಭಿಯಾನ ಪ್ರಾರಂಭಿಸಿರುವ ಕುರಿತು ಪ್ರತಿಕ್ರಿಯೆ ನೀಡಿದ ಅವರು, ನೀಟ್ ಬಂದು ಈಗ ಒಂದು ವರ್ಷ ಆಯ್ತು. ಈ ಬಗ್ಗೆ ನರೇಂದ್ರ ಮೋದಿಯವರು ಚಿಂತನೆ ನಡೆಸಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲಿದ್ದಾರೆ ಎಂದು ಭರವಸೆ ನೀಡಿದರು.