ಹುಬ್ಬಳ್ಳಿ: ವಾಲ್ಮೀಕಿ ಸಮುದಾಯದ ಪ್ರಭಾವಿ ನಾಯಕ ಬಿ.ಶ್ರೀರಾಮುಲು ಅವರಿಗೆ ಉಪ ಮುಖ್ಯಮಂತ್ರಿ ಹುದ್ದೆ ಸಿಗಲಿದೆ ಎಂಬ ನಿರೀಕ್ಷೆ ಹುಸಿಯಾಗಿದ್ದು, ಅವರ ಅಭಿಮಾನಿಗಳು ಬಿಜೆಪಿ ಹೈಕಮಾಂಡ್ ನಿಲುವು ಖಂಡಿಸಿ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದ್ರು.
ಸಚಿವ ಶ್ರೀರಾಮುಲುಗೆ ಡಿಸಿಎಂ ಸ್ಥಾನ ನೀಡುವಂತೆ ಅಭಿಮಾನಿಗಳ ಪ್ರತಿಭಟನೆ - hubli potest news
ಸಚಿವ ಬಿ.ಶ್ರೀರಾಮುಲುಗೆ ಡಿಸಿಎಂ ಸ್ಥಾನ ನೀಡಬೇಕೆಂದು ಆಗ್ರಹಿಸಿ ಸಚಿವ ಶ್ರೀರಾಮುಲು ಅಭಿಮಾನಿಗಳು ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.
![ಸಚಿವ ಶ್ರೀರಾಮುಲುಗೆ ಡಿಸಿಎಂ ಸ್ಥಾನ ನೀಡುವಂತೆ ಅಭಿಮಾನಿಗಳ ಪ್ರತಿಭಟನೆ](https://etvbharatimages.akamaized.net/etvbharat/prod-images/768-512-4268408-thumbnail-3x2-surya.jpeg)
ಈ ಹಿಂದೆ ಮಧ್ಯಪ್ರದೇಶದ ಮುಖ್ಯಮಂತ್ರಿ ಸಮ್ಮುಖದಲ್ಲಿ ಶ್ರೀರಾಮುಲು ಅವರನ್ನು ಡಿಸಿಎಂ ಮಾಡುವುದು ಶತಸಿದ್ಧ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದರು. ಬಿಜೆಪಿ ವಿಧಾನಸಭೆ ಹಾಗೂ ಲೋಕಸಭಾ ಚುನಾವಣೆಗಳಲ್ಲಿ ರಾಮುಲು ಅವರನ್ನು ಸ್ಟಾರ್ ಕ್ಯಾಂಪೇನರ್ ಆಗಿ ಬಳಸಿಕೊಂಡು ಹೆಚ್ಚಿನ ಸೀಟು ಪಡೆದುಕೊಂಡಿದ್ದರು. ಆದರೆ ಈಗ ಉತ್ತಮ ಖಾತೆಯನ್ನೂ ಕೊಡದೇ ಅವಮಾನ ಮಾಡಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ರು.
ಕೂಡಲೇ ಶ್ರೀರಾಮಲು ಅವರಿಗೆ ಡಿಸಿಎಂ ಹುದ್ದೆ ನೀಡಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ರು. ಇದೇ ವೇಳೆ ತಹಶೀಲ್ದಾರರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ವಾಲ್ಮೀಕಿ ಸಮಾಜದನೂರಾರುಯುವಕರು, ರಾಮುಲು ಅಭಿಮಾನಿಗಳು ಪಾಲ್ಗೊಂಡಿದ್ರು.