ಹುಬ್ಬಳ್ಳಿ:ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಿರುವ ಹಿಂದೆ ಬಿಜೆಪಿಯ ಏಕಪಕ್ಷೀಯ ನಿರ್ಧಾರವಿದೆ. ಇದು ಬಿಜೆಪಿ ಚುನಾವಣೆಯ ಗಿಮಿಕ್ ಆಗಿದೆ ಎಂದು ಶಾಸಕ ಪ್ರಸಾದ್ ಅಬ್ಬಯ್ಯ ಗಂಭೀರ ಆರೋಪ ಮಾಡಿದ್ದಾರೆ.
ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಸುಮಾರು 1000 ಕ್ಕೂ ಅಧಿಕ ಕಡೆಗಳಲ್ಲಿ ಗಣೇಶೋತ್ಸವ ಆಚರಣೆಯನ್ನು ವಿಜೃಂಭಣೆಯಿಂದ ಮಾಡಲಾಗುತ್ತಿದೆ. ಆದರೆ ಬಿಜೆಪಿ ಈದ್ಗಾ ಮೈದಾನದಲ್ಲಿ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡುವ ನಿರ್ಣಯದ ಮೂಲಕ ಸಮಾಜದಲ್ಲಿ ಶಾಂತಿ ಭಂಗ ಮಾಡುವ ಕೆಲಸಕ್ಕೆ ಮುಂದಾಗಿದೆ ಎಂದು ಬಿಜೆಪಿ ವಿರುದ್ಧ ಹರಿಹಾಯ್ದರು.