ಕರ್ನಾಟಕ

karnataka

ETV Bharat / state

ಗ್ರಾಮೀಣ ಭಾಗದಲ್ಲಿ ಕೋವಿಡ್ ಪರೀಕ್ಷೆ ಮತ್ತು ವ್ಯಾಕ್ಸಿನೇಷನ್ ಹೆಚ್ಚಿಸಲು ಶಾಸಕ ದೇಸಾಯಿ ಸೂಚನೆ - ವ್ಯಾಕ್ಸಿನೇಷನ್ ಹೆಚ್ಚಿಸಲು ಶಾಸಕ ಅಮೃತ ದೇಸಾಯಿ ಸೂಚನೆ

ಗ್ರಾಮಿಣ ಭಾಗದ ಜನರು ಚಿಕಿತ್ಸೆಗೆ ಒಳಗಾಗಲು ಹಿಂಜರಿಯುತ್ತಿದ್ದು, ಅವರ ಮನವೊಲಿಸಿ ಕೋವಿಡ್ ಕೇರ್ ಸೆಂಟರ್​​​ಗೆ ದಾಖಲಿಸಬೇಕು. ಕೊರೊನಾ ಬಗ್ಗೆ ಗ್ರಾಮೀಣ ಜನರಿಗೆ ಜಾಗೃತಿ ಮೂಡಿಸುವುದು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವ್ಯಾಕ್ಸಿನೇಷನ್‌ ಹೆಚ್ಚಿಸಲು ಪ್ರತಿಯೊಬ್ಬರು ಶ್ರಮಿಸೋಣ ಎಂದು ಶಾಸಕ ಅಮೃತ ದೇಸಾಯಿ ಹೇಳಿದ್ದಾರೆ.

ಗ್ರಾಮೀಣ ಭಾಗದಲ್ಲಿ ಕೋವಿಡ್ ಪರೀಕ್ಷೆ ಮತ್ತು ವ್ಯಾಕ್ಸಿನೇಷನ್ ಹೆಚ್ಚಿಸಲು ಸೂಚನೆ
ಗ್ರಾಮೀಣ ಭಾಗದಲ್ಲಿ ಕೋವಿಡ್ ಪರೀಕ್ಷೆ ಮತ್ತು ವ್ಯಾಕ್ಸಿನೇಷನ್ ಹೆಚ್ಚಿಸಲು ಸೂಚನೆ

By

Published : May 21, 2021, 8:28 AM IST

Updated : May 21, 2021, 9:44 AM IST

ಧಾರವಾಡ:ಗ್ರಾಮೀಣ ಭಾಗದ ಸೋಂಕಿತರು ಕೊವೀಡ್​ ಪರೀಕ್ಷೆಗೆ ಒಳಗಾಗಲು ಹಿಂಜರಿಯುತ್ತಿದ್ದಾರೆ. ಈ ಕುರಿತು ಅಧಿಕಾರಿಗಳು ಸೂಕ್ತ ಯೋಜನೆ ಸಿದ್ಧಪಡಿಸಿ, ಪ್ರತಿಯೊಬ್ಬರನ್ನು ತಪಾಸಣೆಗೆ ಒಳಪಡಿಸುವುದು ಹಾಗೂ ಲಸಿಕೆ ಹಾಕಿಸಿಕೊಳ್ಳುವಂತೆ ಜಾಗೃತಿ ಮೂಡಿಸಬೇಕು ಎಂದು ಶಾಸಕ ಅಮೃತ ದೇಸಾಯಿ ಸೂಚನೆ ನೀಡಿದರು.

ತಾಲೂಕುಮಟ್ಟದ ಅಧಿಕಾರಿಗಳೊಂದಿಗೆ ನಗರದ ಅತಿಥಿ ಗೃಹದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು, ಧಾರವಾಡ ತಾಲೂಕಿನಲ್ಲಿ ನಿರೀಕ್ಷೆಗೂ ಮೀರಿ ಕೊರೊನಾ ಪ್ರಕರಣಗಳು ಪತ್ತೆಯಾಗುತ್ತಿವೆ. ತಕ್ಷಣವೇ ಪಿಡಿಒ ಹಾಗೂ ನೋಡಲ್ ಅಧಿಕಾರಿಗಳು ಕಾರ್ಯಪ್ರವೃತ್ತರಾಗುವ ಮೂಲಕ ಗ್ರಾಮೀಣ ಭಾಗದಲ್ಲಿ ಕೋವಿಡ್ ತಡೆಗೆ ಶ್ರಮಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಕೊರೊನಾ ಪಾಸಿಟಿವ್ ರೋಗಿಗಳಿಗೆ ಈಗಾಗಲೇ ಕ್ಷೇತ್ರದಲ್ಲಿ ಕೋವಿಡ್ ಕೇರ್​ ಸೆಂಟರ್​ ಸಿದ್ಧಪಡಿಸಿದ್ದು, ಹೋಮ್ ಐಸೋಲೇಷನ್ ಹಾಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ಗ್ರಾಮಿಣ ಭಾಗದ ಜನರು ಚಿಕಿತ್ಸೆಗೆ ಒಳಗಾಗಲು ಹಿಂಜರಿಯುತ್ತಿದ್ದು, ಅವರ ಮನವೊಲಿಸಿ ಕೋವಿಡ್ ಕೇರ್ ಸೆಂಟರ್​​ಗೆ ದಾಖಲಿಸಬೇಕು. ಕೊರೊನಾ ಬಗ್ಗೆ ಗ್ರಾಮೀಣ ಜನರಿಗೆ ಜಾಗೃತಿ ಮೂಡಿಸುವುದು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವ್ಯಾಕ್ಸಿನೇಷನ್‌ ಹೆಚ್ಚಿಸಲು ಪ್ರತಿಯೊಬ್ಬರು ಶ್ರಮಿಸೋಣ. ರಾಜ್ಯ ಸರ್ಕಾರ ಕೃಷಿಕರು, ಹಣ್ಣು ಬೆಳೆಗಾರರು ಹಾಗೂ ಟ್ಯಾಕ್ಸಿ ಚಾಲಕರು ಸೇರಿದಂತೆ ಬಡವರಿಗೆ ಘೋಷಿಸಿರುವ ವಿಶೇಷ ಪ್ಯಾಕೇಜ್​ ಪ್ರತಿಯೊಬ್ಬ ಫಲಾನುಭವಿಗಳಿಗೆ ತಲುಪುವಂತಾಗಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಪ್ರಮಾಣಿಕ ಪ್ರಯತ್ನ ಮಾಡಬೇಕು ಎಂದು ಶಾಸಕ ಅಮೃತ ದೇಸಾಯಿ ಹೇಳಿದರು.

ಗ್ರಾಮೀಣ ಭಾಗದಲ್ಲಿ ಕೋವಿಡ್ ಪರೀಕ್ಷೆ ಮತ್ತು ವ್ಯಾಕ್ಸಿನೇಷನ್ ಹೆಚ್ಚಿಸಲು ಸೂಚನೆ

ಹೆಬ್ಬಳ್ಳಿ, ನವಲಗುಂದ ಪಟ್ಟಣ ಲಾಕ್​​ಡೌನ್​:

ಗ್ರಾಮೀಣ ಭಾಗದಲ್ಲಿ ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ಗ್ರಾಮಸ್ಥರು ಲಾಕ್​ಡೌನ್​ ಮೊರೆ ಹೋಗಿದ್ದಾರೆ. ತಾಲೂಕಿನ ಹೆಬ್ಬಳ್ಳಿ ಗ್ರಾಮದಲ್ಲಿ ಜಿಲ್ಲಾಧಿಕಾರಿ ನಿತೇಶ ಪಾಟೀಲ ಆದೇಶ ಮತ್ತು ಹೆಬ್ಬಳ್ಳಿ ಗ್ರಾಮ ಪಂಚಾಯಿತಿ ಕಾರ್ಯಪಡೆಯ ಸಭೆಯಲ್ಲಿ ಚರ್ಚಿಸಿ ಲಾಕ್​​ಡೌನ್ ನಿರ್ಧಾರ ಕೈಗೊಳ್ಳಲಾಗಿದೆ‌‌. ಗ್ರಾಮೀಣ ಭಾಗದಲ್ಲಿ ಕೋವಿಡ್ ಪ್ರಕರಣಗಳನ್ನು ತಡೆಯಲು ಹೆಬ್ಬಳ್ಳಿ ಗ್ರಾಮದ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಹೆಬ್ಬಳ್ಳಿ ಗ್ರಾಮವನ್ನು ಮೇ 22ರಿಂದ 24ರವರೆಗೆ 3 ದಿನಗಳ ಕಾಲ ಸಂಪೂರ್ಣ ಸ್ವಯಂ ಲಾಕ್​​ಡೌನ್ ಮಾಡಿಕೊಳ್ಳುವುದಾಗಿ ಗ್ರಾಮದಲ್ಲಿ ಅನೌನ್ಸ್ ಮಾಡಲಾಗಿದೆ. ಅಗತ್ಯ ವಸ್ತುಗಳ ಖರೀದಿಗೆ ಎರಡು ಗಂಟೆ ಸಮಯ ನಿಗದಿಪಡಿಸಿದ್ದು, ಆ ಸಮಯದಲ್ಲಿ ಮಾತ್ರ ಜನ ಹೊರಗಡೆ ಬರಬೇಕು. ಉಳಿದ ಸಂದರ್ಭದಲ್ಲಿ ಅನವಶ್ಯಕವಾಗಿ ಜನರು ಹೊರಗಡೆ ಸುತ್ತಾಡಬಾರದು. ವೈರಸ್ ನಿಯಂತ್ರಣ ಮಾಡಲು ಈ ನಿರ್ಣಯ ಕೈಗೊಂಡಿರುವುದಾಗಿ ಹೇಳಿದ್ದಾರೆ.

ಕೊರೊನಾ ಹೆಚ್ಚುತ್ತಿರುವ ಹಿನ್ನೆಲೆ ನವಲಗುಂದ ಪಟ್ಟಣದಲ್ಲಿ ಪುರಸಭೆ ಅಧ್ಯಕ್ಷರು, ಸದಸ್ಯರು, ವರ್ತಕರ ಸಂಘದವರು, ತರಕಾರಿ ವ್ಯಾಪಾರಸ್ಥರ ಸಂಘದವರು, ಮತ್ತು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಲಾಕ್​​ಡೌನ್​ ಮಾಡಿಕೊಂಡಿದ್ದಾರೆ. ಬೆಳಗ್ಗೆ 6ರಿಂದ 10 ಗಂಟೆವರೆಗೆ ಅವಶ್ಯಕ ವಸ್ತು ಖರೀದಿಗೆ ನೀಡಿದ್ದ ಕಾಲಾವಕಾಶವನ್ನು ಸಹ ಒಂದು ವಾರಗಳ ಕಾಲ ಬಂದ್ ಮಾಡಿ ಉಳಿದಂತೆ ವ್ಯಾಪಾರ-ವಹಿವಾಟುಗಳಿಗೂ ಬ್ರೇಕ್ ಹಾಕಲು ತೀರ್ಮಾನಿಸಲಾಗಿದೆ.

Last Updated : May 21, 2021, 9:44 AM IST

For All Latest Updates

ABOUT THE AUTHOR

...view details