ಧಾರವಾಡ: ಜಿಲ್ಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಗ್ರಾಮೀಣ ಕ್ಷೇತ್ರದ ಶಾಸಕ ಅಮೃತ ದೇಸಾಯಿ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಐದು ಲಕ್ಷ ಪರಿಹಾರದ ಚೆಕ್ ವಿತರಿಸಿದ್ದಾರೆ.
ಆತ್ಮಹತ್ಯೆ ಮಾಡಿಕೊಂಡ ರೈತ ಕುಟುಂಬಕ್ಕೆ ಚೆಕ್ ವಿತರಿಸಿದ ಶಾಸಕ - ಧಾರವಾಡ ರೈತ ಕುಟುಂಬಕ್ಕೆ ಚೆಕ್ ವಿತರಿಸಿದ ಶಾಸಕ ಸುದ್ದಿ
ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಗ್ರಾಮೀಣ ಕ್ಷೇತ್ರದ ಶಾಸಕ ಅಮೃತ ದೇಸಾಯಿ ಐದು ಲಕ್ಷ ಪರಿಹಾರದ ಚೆಕ್ ವಿತರಿಸಿದ್ದಾರೆ.
![ಆತ್ಮಹತ್ಯೆ ಮಾಡಿಕೊಂಡ ರೈತ ಕುಟುಂಬಕ್ಕೆ ಚೆಕ್ ವಿತರಿಸಿದ ಶಾಸಕ MLA amruth desai](https://etvbharatimages.akamaized.net/etvbharat/prod-images/768-512-5320637-thumbnail-3x2-vid.jpg)
ಶಾಸಕ ಅಮೃತ ದೇಸಾಯಿ
ಆತ್ಮಹತ್ಯೆ ಮಾಡಿಕೊಂಡ ರೈತ ಕುಟುಂಬಕ್ಕೆ ಶಾಸಕ ಅಮೃತ ದೇಸಾಯಿ ಚೆಕ್ ವಿತರಿಸಿದರು.
ಪುಡಕಲಕಟ್ಟಿ ಗ್ರಾಮದ ಚನ್ನಬಸಪ್ಪ ನಿಂಗಪ್ಪ ತರ್ಲಘಟ್ಟ ಹಾಗೂ ಕರಡಿಗುಡ್ಡ ಗ್ರಾಮದ ಗೂಳಪ್ಪ ಬಸಪ್ಪ ಬಾಚಗುಂಡಿ ಅವರು ಕೆಲ ತಿಂಗಳುಗಳ ಹಿಂದೆ ಆತ್ನಹತ್ಯೆ ಮಾಡಿಕೊಂಡಿದ್ದರು. ಅವರ ಕುಟುಂಬದ ಸದಸ್ಯರಿಗೆ ಶಾಸಕ ಅಮೃತ ದೇಸಾಯಿ ಕೃಷಿ ಇಲಾಖೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಐದು ಲಕ್ಷದ ಪರಿಹಾರದ ಚೆಕ್ ವಿತರಿಸಿದ್ದಾರೆ.
ಇನ್ನು ಈ ಸಂದರ್ಭದಲ್ಲಿ ಧಾರವಾಡ ಕೃಷಿ ಇಲಾಖೆ ಸಹಾಯಕ ಕೃಷಿ ನಿರ್ದೇಶಕರು, ಪಕ್ಷದ ಹಿರಿಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.