ಕರ್ನಾಟಕ

karnataka

ETV Bharat / state

ಸಿಎಂ ಬದಲಾವಣೆ ಬಗ್ಗೆ ಮಾತನಾಡಿದ್ರೆ ಕಟ್ಟುನಿಟ್ಟಿನ ಕ್ರಮದ ಎಚ್ಚರಿಕೆ: ಯತ್ನಾಳ್​ - ಹುಬ್ಬಳ್ಳಿಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ

ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಯಾರೇ ಮಾತನಾಡಿದರು, ಅವರ ವಿರುದ್ಧ ಸೂಕ್ತ ಕ್ರಮಗಳನ್ನು ಜರುಗಿಸುವ ಬಗ್ಗೆ ಸಭೆಯಲ್ಲಿ ಎಚ್ಚರಿಕೆ ನೀಡಲಾಗಿದೆ. ಈ ಬಗ್ಗೆ ಯಾರೇ ಮಾತನಾಡಿದರು ಕ್ರಮ ನಿಶ್ಚಿತ. ಆದರೇ ಯಾರಿಗೂ ಕೂಡ ಕತ್ತು ಹಿಡಿದು ಹೊರಹಾಕುವಂತ ಪ್ರಮೇಯವೇ ಇಲ್ಲವೆಂದು ಶಾಸಕ ಯತ್ನಾಳ್​​ ಹೇಳಿದರು.

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ

By

Published : Dec 28, 2021, 8:02 PM IST

ಹುಬ್ಬಳ್ಳಿ : ರಾಜ್ಯದಲ್ಲಿ ಯಾವುದೇ ರೀತಿಯಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ. ಯಾರಾದರೂ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಮಾತನಾಡಿದರೇ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವ ಎಚ್ಚರಿಕೆಯನ್ನು ಕೇಂದ್ರ ಸಚಿವರು ಹಾಗೂ ರಾಜ್ಯ ಉಸ್ತುವಾರಿ ಅರುಣ್​​ ಸಿಂಗ್ ನೀಡಿದ್ದಾರೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ

ನಗರದಲ್ಲಿಂದು ಸಭೆಯ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಯಾರೇ ಮಾತನಾಡಿದರು, ಅವರ ವಿರುದ್ಧ ಸೂಕ್ತ ಕ್ರಮಗಳನ್ನು ಜರುಗಿಸುವ ಬಗ್ಗೆ ಎಚ್ಚರಿಕೆ ನೀಡಲಾಗಿದೆ. ಆದರೇ ಯಾರಿಗೂ ಕೂಡ ಕತ್ತು ಹಿಡಿದು ಹೊರಹಾಕುವಂತ ಪ್ರಮೇಯವೇ ಇಲ್ಲ ಎಂದರು.

ಕೆಲವು ಆಕಾಂಕ್ಷಿಗಳಿಗೆ ನಿರಾಶೆ ಎಂಬುವಂತೆ ಮಾಧ್ಯಮ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಕೆಲವರಿಗೆ ನಿರಾಶೆಯಾಗಿದೆ. ಯಾರಿಗೆ ಅಂತ ನೇರವಾಗಿ ಹೇಳಲು ಆಗುವುದಿಲ್ಲ. ಕೆಲವರು ಬೆಳಗಾವಿ ಅಧಿವೇಶನದ ವೇಳೆ ಸುವರ್ಣಸೌಧದಲ್ಲಿ ಓಡಾಡಿದ್ದಾರೋ ಅವರಿಗೆಲ್ಲ ನಿರಾಶೆಯಾಗಿದೆ ಎಂದು ಯತ್ನಾಳ್​ ಹೇಳಿದ್ರು.

ಮಾಜಿ ಸಿಎಂ ಯಡಿಯೂರಪ್ಪ ಕಾರ್ಯಕಾರಿಣಿಗೆ ಗೈರಾದ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ ಶಾಸಕ ಯತ್ನಾಳ್ ಅವರು, ಯಡಿಯೂರಪ್ಪ ವಿದೇಶಕ್ಕೆ ಹೋಗಿದ್ದಾರೆ. ಇಂದಿನ ಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿಯವರ ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚೆಯಾಗಿದೆ. ಅಲ್ಲದೇ ಇಂದು ಯಾವುದೇ ರೀತಿಯಲ್ಲಿ ಮಹತ್ವದ ಚರ್ಚೆಗಳಾಗಿಲ್ಲ ಎಂದರು.

ABOUT THE AUTHOR

...view details