ಕರ್ನಾಟಕ

karnataka

ETV Bharat / state

ಕೊರೊನಾ ವಾರಿಯರ್ಸ್​ಗೆ ಧನ್ಯವಾದ ಹೇಳಿದ ಶಾಸಕ ಅಮೃತ ದೇಸಾಯಿ - 74th Independence Day

ಅರೋಗ್ಯಪೂರ್ಣ ಸಮಾಜ ನಿರ್ಮಿಸುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯವಾಗಿದ್ದು, ಆ ಕರ್ತವ್ಯವನ್ನು ಸರಿಯಾದ ರೀತಿಯಲ್ಲಿ ನಿಭಾಯಿಸೋಣ ಎಂದು ಶಾಸಕ ಅಮೃತ ದೇಸಾಯಿ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

MLA Pray tributr to corona warriors in Independence day
ಸ್ವಾತಂತ್ರ್ಯೋತ್ಸವ ವೇಳೆ ಕೊರೊನಾ ಯೋಧರಿಗೆ ಧನ್ಯವಾದ ಅರ್ಪಿಸಿದ ಅಮೃತ್ ದೇಸಾಯಿ

By

Published : Aug 15, 2020, 5:48 PM IST

ಧಾರವಾಡ: ಸ್ವಾತಂತ್ರ್ಯೋತ್ಸವದ ಅಂಗವಾಗಿ ಧಾರವಾಡ ಗ್ರಾಮೀಣ ಶಾಸಕ ಅಮೃತ ದೇಸಾಯಿ ಸರ್ಕಾರಿ ಪ್ರಥಮ ದರ್ಜೆ ಪದವಿ ಕಾಲೇಜಿನಲ್ಲಿ ಧ್ವಜಾರೋಹಣ ನೆರವೇರಿಸಿದರು.

ಈ ಸಂದರ್ಭ ಮಾತನಾಡಿದ ಅವರು, ಕೋವಿಡ್​​​ ಮಹಾಮಾರಿಯಿಂದ ವರ್ಚುವಲ್ (ಆನ್​​​ಲೈನ್​​) ತರಗತಿಗಳು ನಡೆಯುತ್ತಿದ್ದು, ವಿದ್ಯಾರ್ಥಿಗಳಿಗೆ ಅನುಕೂಲವಾಗಲು ಪಾಲಕರು ಮೊಬೈಲ್​​ಗಳನ್ನೂ ನೀಡುತ್ತಿದ್ದಾರೆ. ಅದನ್ನು ದುರುಪಯೋಗ ಪಡಿಸಿಕೊಳ್ಳದೆ ಸರಿಯಾದ ರೀತಿಯಲ್ಲಿ ಉಪಯೋಗಿಸಲು ಶಿಕ್ಷಕರು ಹಾಗೂ ಪಾಲಕರು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಬೇಕು ಎಂದರು.

ಗ್ರಾಮೀಣ ಶಾಸಕ ಅಮೃತ ದೇಸಾಯಿಯಿಂದ ಧ್ವಜಾರೋಹಣ

ಅರೋಗ್ಯಪೂರ್ಣ ಸಮಾಜ ನಿರ್ಮಿಸುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯವಾಗಿದ್ದು, ಆ ಕರ್ತವ್ಯವನ್ನು ಸರಿಯಾದ ರೀತಿಯಲ್ಲಿ ನಿಭಾಯಿಸೋಣ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಜಗತ್ತನ್ನೇ ಕಾಡುತ್ತಿರುವ ಕೋವಿಡ್-19 ಸೋಂಕಿನಿಂದ ಜನರ ರಕ್ಷಣೆಗೆ ಹಗಲು ರಾತ್ರಿ ಶ್ರಮಿಸುತ್ತಿರುವ ಕೊರೊನಾ ವಾರಿಯರ್ಸ್​ಗೆ ಧನ್ಯವಾದ ಹೇಳಿದರು. ಈ ಸಂದರ್ಭದಲ್ಲಿ ಕಾಲೇಜಿನ‌ ಪ್ರಾಚಾರ್ಯರು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.

ABOUT THE AUTHOR

...view details