ಕರ್ನಾಟಕ

karnataka

ETV Bharat / state

'ಯಡಿಯೂರಪ್ಪನವರ ನಾಯಕತ್ವಕ್ಕೆ ನನ್ನ ಬೆಂಬಲ': ಶಾಸಕ ಶಂಕರ ಪಾಟೀಲ ಮುನೇನಕೊಪ್ಪ - ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಅರವಿಂದ್ ಬೆಲ್ಲದ್

ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಕುರಿತು ಪ್ರತಿಕ್ರಿಯೆ ನೀಡಿದ ನವಲಗುಂದ ಶಾಸಕ ಶಂಕರ ಪಾಟೀಲ ಮುನೇನಕೊಪ್ಪ ಅವರು, ಸಿಎಂ ಕುರ್ಚಿ ಖಾಲಿ ಇಲ್ಲ. ನಾಯಕತ್ವ ಬದಲಾವಣೆ ಪ್ರಶ್ನೆ ಇಲ್ಲವೇ ಇಲ್ಲ. ಬಿಎಸ್​​​ವೈ ನೇತೃತ್ವದಲ್ಲಿ ಚುನಾವಣೆ ನಡೆದಿದ್ದು, ಅವರೇ ನಮ್ಮ ನಾಯಕ ಎಂದು ಸ್ಪಷ್ಟಪಡಿಸಿದರು.

mla-shankara-patil-muneenakoppa-talk
ಶಾಸಕ ಶಂಕರ ಪಾಟೀಲ ಮುನೇನಕೊಪ್ಪ

By

Published : Jun 15, 2021, 5:11 PM IST

ಹುಬ್ಬಳ್ಳಿ:ನಮ್ಮ ಸಮಾಜದ ಹಿರಿಯ ಮುಖಂಡರಾದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಅರವಿಂದ್ ಬೆಲ್ಲದ್ ಯಾವ ಅರ್ಥದಲ್ಲಿ ಮಾತನಾಡುತ್ತಿದ್ದಾರೆ ಗೊತ್ತಿಲ್ಲ. ಬೆಲ್ಲದ್ ಅವರು ಚಿಕ್ಕವರಿದ್ದು, ರಾಜಕೀಯದಲ್ಲಿ ಇನ್ನು ಬೆಳೆಯುವ ಅವಕಾಶ ಇದೆ. ಅವರು ಪಕ್ಷದ ತೀರ್ಮಾನದಂತೆ ನಡೆಯಲಿ ಎಂದು ನವಲಗುಂದ ಶಾಸಕ ಶಂಕರ ಪಾಟೀಲ ಮುನೇನಕೊಪ್ಪ ಹೇಳಿದರು.

ಶಾಸಕ ಶಂಕರ ಪಾಟೀಲ ಮುನೇನಕೊಪ್ಪ

ಓದಿ: 'ಹರಿವಿ'ನ ಪಯಣ ಮುಗಿಸಿ ಹೋದ ‘ಸಂಚಾರಿ’: ಮಣ್ಣಲ್ಲಿ ಮಣ್ಣಾದ ವಿಜಯ್

ನಗರದಲ್ಲಿಂದು ಮಾಧ್ಯಮದ ಜೊತೆ ಮಾತನಾಡಿದ ಅವರು, ಬೆಲ್ಲದ್ ಅವರು ದೂರದೃಷ್ಟಿ ಇಟ್ಟುಕೊಂಡು ರಾಜಕಾರಣ ಮಾಡಬೇಕು. ಧಾರವಾಡ ಜಿಲ್ಲೆಯ ಶಾಸಕರಲ್ಲಿನ ಒಗ್ಗಟ್ಟು ಒಡೆಯಬಾರದು. ಬೆಲ್ಲದ್ ಅವರು ಸಿಎಂ ಆದರೆ ನಮಗೂ ತುಂಬಾ ಖುಷಿ ಇದೆ. ಆದರೆ ಅದಕ್ಕೆ ಇನ್ನೂ ತುಂಬಾ ಸಮಯ ಇದೆ. ಧಾರವಾಡ ಜಿಲ್ಲೆಯಲ್ಲಿ ಪಕ್ಷದ ಹಿರಿಯರಾದ ಪ್ರಹ್ಲಾದ ಜೋಶಿ, ಜಗದೀಶ್ ಶೆಟ್ಟರ್ ಇದ್ದಾರೆ‌. ಅವರ ಹೆಸರಿಗೆ ಧಕ್ಕೆ ಬಾರದಂತೆ ಬೆಲ್ಲದ್ ಅವರು ನಡೆದುಕೊಳ್ಳಬೇಕು ಎಂದು ಅವರು ಹೇಳಿದರು.

ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ನಾಳೆ ಬೆಂಗಳೂರಿಗೆ ಆಗಮಿಸುವ ವಿಚಾರವಾಗಿ ಮಾತನಾಡಿದ ಮುನೇನಕೊಪ್ಪ, ವರಿಷ್ಠರನ್ನು ಭೇಟಿ ಮಾಡುವ ಬಗ್ಗೆ ಸದ್ಯಕ್ಕೆ ನಮ್ಮ ಪಕ್ಷದ ಶಾಸಕರಿಗೆ ಸೂಚನೆ ಬಂದಿಲ್ಲ. ವರಿಷ್ಠರು ಶಾಸಕರ ಜೊತೆ ಪ್ರತ್ಯೇಕ ಚರ್ಚೆಗೆ ಅವಕಾಶ ನೀಡಿದರೇ ನಮ್ಮ ಅಭಿಪ್ರಾಯ ತಿಳಿಸುತ್ತೇವೆ ಎಂದರು.

ನಾಯಕತ್ವ ಬದಲಾವಣೆ ಕುರಿತು ಪ್ರತಿಕ್ರಿಯಿಸಿ, ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ. ನಾಯಕತ್ವ ಬದಲಾವಣೆ ಇಲ್ಲವೇ ಇಲ್ಲ. ಬಿಎಸ್​​​ವೈ ನೇತೃತ್ವದಲ್ಲಿ ಚುನಾವಣೆ ನಡೆದಿದ್ದು, ಅವರೇ ನಮ್ಮ ನಾಯಕರು. ಬಿಎಸ್​​​ವೈ ನಾಯಕತ್ವಕ್ಕೆ ನನ್ನ ಬೆಂಬಲ ಇದೆ. ಸಚಿವ ಸ್ಥಾನ ಬೇಕು ಎಂದು ಕೇಳಿಲ್ಲ, ಸದ್ಯಕ್ಕೆ ನಿಗಮ ಮಂಡಳಿ ಸ್ಥಾನ ನೀಡಿರುವುದು ನನಗೆ ತೃಪ್ತಿ ಇದೆ ಎಂದು ಸ್ಪಷ್ಟಪಡಿಸಿದರು.

ABOUT THE AUTHOR

...view details