ಧಾರವಾಡ :ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಸಿಎಎ ವಿರುದ್ಧ ನಡೆಸುತ್ತಿರುವ ಹೋರಾಟಕ್ಕೆ ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ್ ಮಾನೆ ಭೇಟಿ ನೀಡಿ ಬೆಂಬಲ ವ್ಯಕ್ತಪಡಿಸಿದ್ದಾರೆ. ಕಳೆದ ಏಳು ದಿನಗಳಿಂದ ನಡೆಯುತ್ತಿರುವ ನಿರಂತರ ಧರಣಿ ಸ್ಥಳಕ್ಕೆ ಭೇಟಿ ನೀಡಿ ಸಿಎಎ ಹಾಗೂ ಎನ್ಪಿಆರ್ ರದ್ದುಗೊಳಿಸುವಂತೆ ಅವರು ಆಗ್ರಹಿಸಿದರು.
'ಇದು ಮತ್ತೊಂದು ಸ್ವಾತಂತ್ರ್ಯ ಸಂಗ್ರಾಮ.. ಕೇಂದ್ರ ನಡೆ ಬ್ರಿಟಿಷ್ ಆಡಳಿತ ನೆನಪಿಸುತ್ತೆ..'
ಭಾರತದ ಸಂವಿಧಾನದಲ್ಲಿ ವಿವಿಧತೆಯಲ್ಲಿ ಏಕತೆ ಇದೆ. ಯಾರೆಲ್ಲ ಭಾರತ ಸಂವಿಧಾನಕ್ಕೆ ಬದ್ಧರಾಗಿದ್ದೇವೋ ಅವರೆಲ್ಲ ಹೋರಾಟ ಮಾಡುತ್ತಿದ್ದೇವೆ. ಯಾವ ಕಾರಣಕ್ಕೂ ಕೂಡ ಸಂವಿಧಾನದ ಆಶಯದ ವಿರುದ್ಧ ನಡೆಯಲು ಸರ್ಕಾರಕ್ಕೆ ಬಿಡುವುದಿಲ್ಲ ಎಂದು ಸರ್ಕಾರಕ್ಕೆ ಕಾಂಗ್ರೆಸ್ ಎಂಎಲ್‌ಸಿ ಶ್ರೀನಿವಾಸ್ ಮಾನೆ ಎಚ್ಚರಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತ್ಯಾತೀತ ನಿಲುವು ಹೊಂದಿದ ನಾಗರಿಕರು ತಿದ್ದುಪಡಿ ಪೌರತ್ವ ಕಾಯ್ದೆ ವಿರೋಧಿಸಿ ಹೋರಾಟ ಮಾಡುತ್ತಿದ್ದಾರೆ. ಈ ಕಾಯ್ದೆ ಮೂಲಕ ಭಾರತೀಯ ಸರ್ಕಾರ ನಾಗರಿಕರ ಹಕ್ಕು ಕಸಿದುಕೊಳ್ಳುತ್ತಿದೆ. ಪ್ರತಿಭಟನೆ ಸಂಘರ್ಷ ನೋಡಿದರೆ ಸ್ವಾತಂತ್ರ್ಯ ಸಂಗ್ರಾಮ ನೆನಪಾಗುತ್ತಿದೆ. ಈ ಪ್ರತಿಭಟನೆ ಹತ್ತಿಕ್ಕಲು ಭಾರತ ಸರ್ಕಾರ ಮಾಡ್ತಿರೋದನ್ನು ನೋಡದರೆ ಬ್ರಿಟಿಷ್ ಆಡಳಿತ ನೆನಪಾಗುತ್ತಿದೆ ಎಂದರು.
ಭಾರತದ ಸಂವಿಧಾನದಲ್ಲಿ ವಿವಿಧತೆಯಲ್ಲಿ ಏಕತೆ ಇದೆ. ಯಾರೆಲ್ಲ ಭಾರತ ಸಂವಿಧಾನಕ್ಕೆ ಬದ್ಧರಾಗಿದ್ದೇವೋ ಅವರೆಲ್ಲ ಹೋರಾಟ ಮಾಡುತ್ತಿದ್ದೇವೆ. ಯಾವ ಕಾರಣಕ್ಕೂ ಕೂಡ ಸಂವಿಧಾನದ ಆಶಯದ ವಿರುದ್ಧ ನಡೆಯಲು ಸರ್ಕಾರಕ್ಕೆ ಬಿಡುವುದಿಲ್ಲ ಎಂದು ಸರ್ಕಾರಕ್ಕೆ ಎಚ್ಚರಿಸಿದರು.