ಕರ್ನಾಟಕ

karnataka

ETV Bharat / state

ನವಲಗುಂದ ತಾಲೂಕಿನ ಮೊರಬ ಗ್ರಾಮ ಸೀಲ್​ಡೌನ್: ಡಿಸಿ ಆದೇಶ - Dharwad DC news

ವ್ಯಕ್ತಿಯೊಬ್ಬನಲ್ಲಿ ಸೋಂಕು ಪತ್ತೆಯಾಗಿದ್ದರಿಂದ ನವಲಗುಂದ ತಾಲೂಕಿನ ಮೊರಬ ಗ್ರಾಮವನ್ನು ಸಂಪೂರ್ಣ ಸೀಲ್​ಡೌನ್ ಮಾಡಿ‌ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

Moraba village seal down
ಜಿಲ್ಲಾಧಿಕಾರಿ ದೀಪಾ ಚೋಳನ್​‌

By

Published : Jun 11, 2020, 11:41 PM IST

ಧಾರವಾಡ:ನವಲಗುಂದ ತಾಲೂಕಿನ ಮೊರಬ ಗ್ರಾಮದಲ್ಲಿ ಕೊರೊನಾ ಸೋಂಕಿತ ವ್ಯಕ್ತಿಯೊಬ್ಬ ಪತ್ತೆಯಾಗಿದ್ದು ಸೋಂಕಿತ ವ್ಯಕ್ತಿಯ ಮನೆಯಿಂದ 100 ಮೀಟರ್ ಅಂತರದವರೆಗಿನ ಪ್ರದೇಶವನ್ನು ನಿರ್ಬಂಧಿತ ವಲಯವೆಂದು ಘೋಷಿಸಿ ಸಂಪೂರ್ಣ ಪ್ರದೇಶವನ್ನು ಸೀಲ್​​ಡೌನ್ ಮಾಡಿ‌ ಜಿಲ್ಲಾಧಿಕಾರಿ ದೀಪಾ ಚೋಳನ್​‌ ಆದೇಶ ಹೊರಡಿಸಿದ್ದಾರೆ.

ಆದೇಶ ಪ್ರತಿ

ಮೊರಬ ಗ್ರಾಮವನ್ನು ಬಫರ್ ಝೋನ್ ಎಂದು ಘೋಷಿಸಿ ಕೊರೊನಾ ಸೋಂಕು ಹರಡದಂತೆ ತಡೆಯಲು ಈ ಸ್ಥಳದಲ್ಲಿ ಸದಾ ಕಣ್ಗಾವಲು ಮತ್ತು ಸಾಮಾಜಿಕ ಅಂತರ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

ಆದೇಶ ಪ್ರತಿ

ನಿರ್ಬಂಧಿತ ವಲಯದ 100 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ವ್ಯಕ್ತಿ ಹಾಗೂ ಸಂಸ್ಥೆಯವರು ಆಹಾರ ಹಾಗೂ ಇತರೆ ಸೇವೆಗಳನ್ನು ವಿತರಿಸುವುದನ್ನು ಸಹ ನಿಷೇಧ ಮಾಡಲಾಗಿದೆ.

ಆದೇಶ ಪ್ರತಿ

ABOUT THE AUTHOR

...view details