ಕರ್ನಾಟಕ

karnataka

ಹು-ಧಾ ಕಮಿಷನರೇಟ್ ವ್ಯಾಪ್ತಿಯ 150ಕ್ಕೂ ಹೆಚ್ಚು ಪೊಲೀಸರಿಗೆ ಸೋಂಕು.. ಎಲ್ಲರೂ ಚೇತರಿಸಿಕೊಳ್ತಿದಾರೆ..

By

Published : Jan 16, 2022, 3:20 PM IST

ಕೋವಿಡ್ ದೃಢಪಟ್ಟ ಪೊಲೀಸ್ ಸಿಬ್ಬಂದಿಯೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದ್ದಾರೆ. ಎಲ್ಲರ ಆರೋಗ್ಯ ಉತ್ತಮವಾಗಿದೆ‌. ಯಾರ ಆರೋಗ್ಯವೂ ಚಿಂತಾಜನಕವಾಗಿಲ್ಲ. ಎಲ್ಲರೂ ಚೇತರಿಸಿಕೊಳ್ಳುತ್ತಿದ್ದಾರೆ..

Hubli-dharwad Police Commissioner Laburam
ಹು-ಧಾ ಪೊಲೀಸ್ ಆಯುಕ್ತ ಲಾಬೂರಾಮ್

ಹುಬ್ಬಳ್ಳಿ :ದಿನದಿಂದ ದಿನಕ್ಕೆ ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿವೆ. ಇದನ್ನು ನಿಯಂತ್ರಿಸುವ ಸಲುವಾಗಿ ಸರ್ಕಾರ ವಾರಾಂತ್ಯ ಕರ್ಫ್ಯೂ ಜಾರಿ ಮಾಡಿದೆ. ಈ ಹಿನ್ನೆಲೆಯಲ್ಲಿ ಇಂದು ಹು-ಧಾ ಪೊಲೀಸ್ ಆಯುಕ್ತ ಲಾಬೂರಾಮ್ ಅವರು ಸಿಟಿ ರೌಂಡ್ಸ್ ಹೊಡೆದರು.

ಅವಳಿನಗರದಲ್ಲಿ 100ಕ್ಕೂ ಅಧಿಕ ಪೊಲೀಸರಿಗೆ ಸೋಂಕು ತಗುಲಿದ ಬಗ್ಗೆ ನಗರ ಪೊಲೀಸ್‌ ಆಯುಕ್ತ ಲಾಬೂರಾಮ್‌ ಅವರು ಮಾಹಿತಿ ನೀಡಿರುವುದು..

ಚೆನ್ನಮ್ಮ ವೃತ್ತದಲ್ಲಿ ಪೊಲೀಸ್​​ ಬಿಗಿ ಭದ್ರತೆ ಪರಿಶೀಲನೆ ನಡೆಸಿದ ಆಯುಕ್ತರು, ಇಲಾಖೆಯಲ್ಲಿನ ಸಿಬ್ಬಂದಿಗೆ ಕೋವಿಡ್​​ ಕುರಿತಂತೆ ಅಗತ್ಯ ಸಲಹೆ, ಸೂಚನೆ ನೀಡಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದರು.

ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಈವರೆಗೆ 150ಕ್ಕೂ ಹೆಚ್ಚು ಸಿಬ್ಬಂದಿಗೆ ಕೋವಿಡ್ ದೃಢಪಟ್ಟಿದೆ. ಸೋಂಕಿತರು ಮನೆಯಲ್ಲಿಯೇ ಸೂಕ್ತ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನು ಮನೆಯಲ್ಲಿ ಚಿಕಿತ್ಸೆ ಪಡೆಯಲು ಆಗದೆ ಇರುವಂತಹವರಿಗಾಗಿ ನವನಗರದ ಅಂಬೇಡ್ಕರ್ ಭವನದಲ್ಲಿ 45 ಹಾಸಿಗೆಗಳ ಕೋವಿಡ್ ಸೆಂಟರ್ ಪ್ರಾರಂಭ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಕೋವಿಡ್ ದೃಢಪಟ್ಟ ಪೊಲೀಸ್ ಸಿಬ್ಬಂದಿಯೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದ್ದಾರೆ. ಎಲ್ಲರ ಆರೋಗ್ಯ ಉತ್ತಮವಾಗಿದೆ‌. ಯಾರ ಆರೋಗ್ಯವೂ ಚಿಂತಾಜನಕವಾಗಿಲ್ಲ. ಎಲ್ಲರೂ ಚೇತರಿಸಿಕೊಳ್ಳುತ್ತಿದ್ದಾರೆ.

ಅವರಿಗೆ ಸೂಕ್ತ ಸಲಹೆ ಮತ್ತು ಧೈರ್ಯ ತುಂಬುವ ಕೆಲಸ ಮಾಡಲಾಗಿದೆ. ಇನ್ನೂ ಮುಂಜಾಗ್ರತಾ ಕ್ರಮವಾಗಿ ಕೋವಿಡ್ ತಗುಲಿದ ಪೊಲೀಸ್ ಠಾಣಾ ಸಿಬ್ಬಂದಿಗೂ ವೇಗವಾಗಿ ಕೋವಿಡ್ ಪರೀಕ್ಷೆ ಮಾಡಲಾಗುತ್ತಿದೆ ಎಂದರು.

ಇದನ್ನೂ ಓದಿ: ಬೆಳಗಾವಿ: ಮೂವರು ಕಂದಮ್ಮಗಳನ್ನು ಬಲಿ ಪಡೆದ ರೂಬೆಲ್ಲಾ ಚುಚ್ಚುಮದ್ದು

ABOUT THE AUTHOR

...view details