ಧಾರವಾಡ: ನಗರದ ಲಕಮನಹಳ್ಳಿ ಗ್ರಾಮ ವ್ಯಾಪ್ತಿಯ ಸಿದ್ದೇಶ್ವರ ನಗರದಲ್ಲಿ ಕಳೆದ ಎರಡು ದಿನಗಳಲ್ಲಿ 80ಕ್ಕೂ ಹೆಚ್ಚು ಕೋವಿಡ್ ಪ್ರಕರಣಗಳು ದೃಢವಾಗಿದ್ದು, ನಿವಾಸಿಗಳಲ್ಲಿ ಆತಂಕ ಹೆಚ್ಚಿಸಿದೆ.
ಕಾಲೋನಿಗೆ ಸಂಪರ್ಕ ಕಲ್ಪಿಸುವ ಎಲ್ಲ ರಸ್ತೆಗಳನ್ನು ಬಂದ್ ಮಾಡಿ ಸಿದ್ದೇಶ್ವರ ಕಾಲೋನಿಯನ್ನು ಕಂಪ್ಲೀಟ್ ಸೀಲ್ಡೌನ್ ಮಾಡಲಾಗಿದೆ. ಕಾಲೋನಿಯ ಕೆಲವರು ಕೋವಿಡ್ ಪಾಸಿಟಿವ್ ಬಂದರೂ ಕೋವಿಡ್ (ಕೇರ್) ಕಾಳಜಿ ಕೇಂದ್ರಗಳಿಗೆ ಹೋಗಲು ನಿರಾಕರಿಸಿದ್ದರು. ಜಿಲ್ಲಾಧಿಕಾರಿಗಳ ನಿರ್ದೇಶನದ ಮೇರೆಗೆ ತಹಶೀಲ್ದಾರ್ ಸಂತೋಷ್ ಬಿರಾದಾರ ಹಾಗೂ ಸಹಾಯಕ ಪೋಲಿಸ್ ಆಯುಕ್ತೆ ಅನುಷಾ ಜಿ. ಅವರು ಕಾಲೋನಿ ಪ್ರಮುಖರಿಗೆ ಹಾಗೂ ಸೋಂಕಿತರ ಕುಟುಂಬಸ್ಥರಿಗೆ ತಿಳಿ ಹೇಳಿ ಕೋವಿಡ್ ಕೇರ್ ಸೆಂಟರ್ಗೆ ದಾಖಲಾಗುವಂತೆ ಮನವಿ ಮಾಡಿದ್ದಾರೆ.