ಕರ್ನಾಟಕ

karnataka

ETV Bharat / state

ದೀಪಾವಳಿ ಹಬ್ಬಕ್ಕೆ 500ಕ್ಕೂ ಹೆಚ್ಚು ವಿಶೇಷ ಬಸ್​ಗಳ ಸೇವೆ; ಹೆಚ್ಚು ಸೀಟ್​ ಬುಕ್​ ಮಾಡಿದ್ರೆ ಆಫರ್​ - ಸ್ಲೀಪರ್ ಬಸ್​

Special bus facility for Diwali festival: ದೀಪಾವಳಿ ಹಬ್ಬಕ್ಕಾಗಿ ವಾಯವ್ಯ ಸಾರಿಗೆ ಸಂಸ್ಥೆಯಿಂದ 500ಕ್ಕೂ ಹೆಚ್ಚು ವಿಶೇಷ ಬಸ್​ಗಳ ಸೌಲಭ್ಯ ಒದಗಿಸಲಾಗಿದೆ.

special bus facility for Diwali festival:
ದೀಪಾವಳಿ ಹಬ್ಬಕ್ಕೆ 500ಕ್ಕೂ ಹೆಚ್ಚು ವಿಶೇಷ ಬಸ್ ಸೌಲಭ್ಯ

By ETV Bharat Karnataka Team

Published : Nov 4, 2023, 1:28 PM IST

ಹುಬ್ಬಳ್ಳಿ :ಬೆಳಕಿನ ಹಬ್ಬ ದೀಪಾವಳಿ ಆಚರಣೆಗೆ ರಾಜ್ಯದ ಹಾಗೂ ಹೊರ ರಾಜ್ಯಗಳ ವಿವಿಧ ಸ್ಥಳಗಳಿಂದ ಆಗಮಿಸುವ ಮತ್ತು ಹಬ್ಬ ಮುಗಿಸಿಕೊಂಡು ಹಿಂದಿರುಗುವ ಪ್ರಯಾಣಿಕರ ಅನುಕೂಲಕ್ಕಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ 500ಕ್ಕೂ ಹೆಚ್ಚು ವಿಶೇಷ ಬಸ್​ಗಳ ವ್ಯವಸ್ಥೆ ಮಾಡಲಾಗಿದೆ.

ನವೆಂಬರ್ 11ರಂದು (ಶನಿವಾರ) ವಾರಾಂತ್ಯ, 12 ರಂದು (ಭಾನುವಾರ) ನರಕ ಚತುರ್ದಶಿ, 13 ರಂದು ಸೋಮವಾರ ಅಮಾವಾಸ್ಯೆ, ಲಕ್ಷ್ಮೀ ಪೂಜೆ ಹಾಗೂ 14ರಂದು ಮಂಗಳವಾರ ಬಲಿಪಾಡ್ಯಮಿ ಇದೆ. ಹಬ್ಬ ಆಚರಿಸಲು ನ.10ರಂದು ಶುಕ್ರವಾರ ಮತ್ತು 11 ರಂದು ಶನಿವಾರ ಬೆಂಗಳೂರು, ಮಂಗಳೂರು, ಗೋವಾ, ಮಹಾರಾಷ್ಟ್ರದ ಪುಣೆ ಸೇರಿದಂತೆ ರಾಜ್ಯದ ಮತ್ತು ನೆರೆಯ ರಾಜ್ಯಗಳ ವಿವಿಧ ಭಾಗಗಳಿಂದ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ಸ್ವಂತ ಊರುಗಳಿಗೆ ಬರುವ ನಿರೀಕ್ಷೆ ಇದೆ.

ಹಬ್ಬಕ್ಕೆ ಆಗಮಿಸುವ ಪ್ರಯಾಣಿಕರಿಗೆ ಅನುಕೂಲವಾಗುವಂತೆ ನ.10 ಹಾಗೂ 11ರಂದು ಬೆಂಗಳೂರು, ಮಂಗಳೂರು, ಪುಣೆ, ಗೋವಾ ಮತ್ತಿತರ ಸ್ಥಳಗಳಿಂದ ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ, ಚಿಕ್ಕೋಡಿ, ಉತ್ತರ ಕನ್ನಡ, ಹಾವೇರಿ, ಬಾಗಲಕೋಟೆ ಮತ್ತಿತರ ಪ್ರಮುಖ ಸ್ಥಳಗಳಿಗೆ ಹೆಚ್ಚುವರಿ ಬಸ್​ಗಳನ್ನು ವ್ಯವಸ್ಥೆ ಮಾಡಲಾಗಿದೆ.

ಇದಕ್ಕಾಗಿ ಮಲ್ಟಿ ಆ್ಯಕ್ಸಲ್ ವೋಲ್ವೊ, ಸ್ಲೀಪರ್, ರಾಜಹಂಸ ಮುಂತಾದ 50 ಪ್ರತಿಷ್ಠಿತ ಐಶಾರಾಮಿ ಬಸ್ಸುಗಳು ಹಾಗೂ 200 ವೇಗದೂತ ಸಾರಿಗೆಗಳು ಸೇರಿದಂತೆ 250ಕ್ಕೂ ಹೆಚ್ಚು ಹೆಚ್ಚುವರಿ ಬಸ್ಸುಗಳನ್ನು ಕಾರ್ಯಾಚರಣೆ ಮಾಡಲು ಯೋಜಿಸಲಾಗಿದೆ. ಅಲ್ಲದೇ ಸ್ಥಳೀಯ ಬಸ್ ನಿಲ್ದಾಣಗಳಿಂದ ಜಿಲ್ಲೆಯೊಳಗೆ ಹಾಗೂ ನೆರೆಯ ಜಿಲ್ಲೆಗಳಿಗೆ ಪ್ರಯಾಣಿಕರ ದಟ್ಟಣೆಗೆ ತಕ್ಕಂತೆ ಹೆಚ್ಚುವರಿ ಬಸ್​ಗಳನ್ನು ಓಡಿಸಲಾಗುತ್ತದೆ.

ಅದೇ ರೀತಿ ಹಬ್ಬ ಮುಗಿಸಿಕೊಂಡು ಸ್ವಂತ ಊರುಗಳಿಂದ ಹಿಂದಿರುವ ಪ್ರಯಾಣಿಕರ ಅನುಕೂಲಕ್ಕಾಗಿ ನ.15ರಿಂದ 19ರವರೆಗೆ ಸಂಸ್ಥೆಯ ವ್ಯಾಪ್ತಿಯ ಪ್ರಮುಖ ಬಸ್ ನಿಲ್ದಾಣಗಳಿಂದ ಬೆಂಗಳೂರು, ಮಂಗಳೂರು, ಗೋವಾ, ಮಹಾರಾಷ್ಟ್ರದ ಪುಣೆ ಸೇರಿದಂತೆ ರಾಜ್ಯದ ಮತ್ತು ನೆರೆಯ ರಾಜ್ಯಗಳ ಪ್ರಮುಖ ಸ್ಥಳಗಳಿಗೆ ಪ್ರಯಾಣಿಕರ ದಟ್ಟಣೆಗೆ ಅನುಗುಣವಾಗಿ 250ಕ್ಕೂ ಹೆಚ್ಚು ವಿಶೇಷ ಬಸ್ಸುಗಳನ್ನು ಸಂಚರಿಸಲಿವೆ.

ಮುಂಗಡ ಬುಕ್ಕಿಂಗ್ ಮಾಡಿದರೆ, ರಿಯಾಯಿತಿ:ಸಂಸ್ಥೆಯ ವೆಬ್​ಸೈಟ್: www.ksrtc.in ಅಥವಾ KSRTC Mobile App, ಪ್ರಮುಖ ಬಸ್ ನಿಲ್ದಾಣಗಳಲ್ಲಿರುವ ಟಿಕೆಟ್ ಬುಕ್ಕಿಂಗ್ ಕೌಂಟರ್‌ಗಳು ಹಾಗೂ ಖಾಸಗಿ ಫ್ರಾಂಚೈಸಿ ಕೌಂಟರ್​ಗಳಲ್ಲಿ ಮುಂಗಡ ಟಿಕೆಟ್ ಬುಕ್ಕಿಂಗ್ ಮಾಡಲು ಅವಕಾಶ ಕಲ್ಪಿಸಲಾಗಿದೆ. ನಾಲ್ಕು ಅಥವಾ ಹೆಚ್ಚು ಆಸನಗಳನ್ನು ಒಂದೇ ಟಿಕೆಟ್​ನಲ್ಲಿ ಕಾಯ್ದಿರಿಸಿದರೆ ಪ್ರಯಾಣ ದರದಲ್ಲಿ ಶೇಕಡ 5ರಷ್ಟು ರಿಯಾಯಿತಿ ನೀಡಲಾಗುತ್ತದೆ.

ಹೋಗುವ ಹಾಗೂ ಬರುವ ಪ್ರಯಾಣಕ್ಕೆ ಒಂದೇ ಟಿಕೆಟ್ ಪಡೆದರೆ, ಹಿಂದಿರುಗುವ ಪ್ರಯಾಣ ದರದಲ್ಲಿ ಶೇಕಡ 10ರಷ್ಟು ರಿಯಾಯಿತಿ ನೀಡಲಾಗುತ್ತದೆ. ಕೊನೆಯ ಕ್ಷಣದ ದಟ್ಟಣೆನಿಂದ ತಪ್ಪಿಸಿಕೊಳ್ಳಲು ಕೂಡಲೇ ಮುಂಗಡ ಬುಕ್ಕಿಂಗ್ ಮಾಡಿಕೊಳ್ಳುವುದು ಸೂಕ್ತ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ:ಸಿಎಂ ಹೇಳಿಕೆ ನಡುವೆಯೇ ಸಿದ್ದರಾಮಯ್ಯ- ಸಚಿವರ ಬ್ರೇಕ್ ಫಾಸ್ಟ್ ಸಭೆ: ಗೊಂದಲ ನಿವಾರಣೆಗೆ ಯತ್ನ

ABOUT THE AUTHOR

...view details