ಧಾರವಾಡ: ಫೆ.16 ರಂದು ಸಂಜೆ 4ಕ್ಕೆ ಧಾರವಾಡದ ಪ್ರಸಿದ್ಧ ಮುರುಘಾಮಠದ ಜಾತ್ರಾ ಮಹೋತ್ಸವ ನಡೆಯಲಿದೆ ಎಂದು ಮುರುಘಾಮಠದ ಮಲ್ಲಿಕಾರ್ಜುನ ಸ್ವಾಮೀಜಿ ಹೇಳಿದರು.
ಧಾರವಾಡದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಜಾತ್ರಾ ಮಹೋತ್ಸವದ ನಿಮಿತ್ತ ಫೆ.7 ರಿಂದ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿ ಕಾರ್ಯಕ್ರಮಗಳು ಆರಂಭವಾಗಿವೆ. ಫೆ.15 ರಂದು ಡಂಬಳ - ಗದಗದ ಡಾ. ತೋಂಟದ ಸಿದ್ಧರಾಮ ಸ್ವಾಮೀಜಿಗಳಿಗೆ ಮೃತ್ಯುಂಜಯ ಮಹಾಂತ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿಯು 25 ಸಾವಿರ ನಗದು ಹಾಗೂ 10 ಗ್ರಾಂ ತೂಕದ ಚಿನ್ನದ ಮಹಾಂತಪ್ಪಗಳ ಮೂರ್ತಿ ಒಳಗೊಂಡಿದೆ ಎಂದರು.