ಹುಬ್ಬಳ್ಳಿ :ಧಾರವಾಡ ಜಿಲ್ಲೆಯಲ್ಲಿ ಚಿರತೆ ಪ್ರತ್ಯಕ್ಷವಾಗಿರುವ ಸುದ್ದಿ ಈಗ ಸಾಮಾಜಿಕ ಜಾಲತಾಣದಲ್ಲಿ ಮತ್ತೊಂದು ತಿರುವ ಪಡೆದಿದೆ. ಮುಂಬೈನ ಗೋರೆಗಾಂವ್ನಲ್ಲಿ ನಡೆದಿದ್ದ ಪ್ರಕರಣವನ್ನು ಹುಬ್ಬಳ್ಳಿಯಲ್ಲಿ ನಡೆದಿದೆ ಎಂದು ಹರಡಲಾಗುತ್ತಿದೆ.
ಈ ಹಿನ್ನೆಲೆ ಅರಣ್ಯ ಇಲಾಖೆ ಸಿಬ್ಬಂದಿ ಸೈಬರ್ ಕ್ರೈಂ ಠಾಣೆಗೆ ದೂರು ನೀಡಲು ಮುಂದಾಗಿದ್ದಾರೆ. ಈ ವಿಡಿಯೋ ವೈರಲ್ ಆದ ಬೆನ್ನಲ್ಲೇ ಹುಬ್ಬಳ್ಳಿ ಜನತೆ ಆತಂಕಿತರಾಗಿದ್ದಾರೆ. ಮನೆಯಿಂದ ಹೊರ ಬರಲು ಸಹ ಹೆದರುವ ಪರಿಸ್ಥಿತಿ ನಿರ್ಮಾಣವಾಗಿದೆ.