ಹುಬ್ಬಳ್ಳಿ:ಒಂದು ಎಕರೆ ಜಮೀನಿಗಾಗಿ ಅಣ್ಣನನ್ನೇ ಹತ್ಯೆ ಮಾಡಿದ್ದ ತಮ್ಮನನ್ನು ಬಂಧಿಸುವಲ್ಲಿ ಕಲಘಟಗಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಕಲಘಟಗಿಯಲ್ಲಿ ಜಮೀನಿಗಾಗಿ ಅಣ್ಣನ ಕೊಲೆ: ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್ - ಕೊಲೆ
ಒಂದು ಎಕರೆ ಜಮೀನಿಗಾಗಿ ಅಣ್ಣನನ್ನು ಕೊಲೆ ಮಾಡಿದ್ದ ಆರೋಪಿಯನ್ನು ಕಲಘಟಗಿ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ಏಪ್ರಿಲ್ 23ರಂದು ಕಲಘಟಗಿ ತಾಲೂಕಿನ ಜಮ್ಮಿಹಾಳ ಗ್ರಾಮದಲ್ಲಿ ಮೈಲಾರಿ ತಿರ್ಲಾಪುರ ಎಂಬಾತನನ್ನು ರವಿ ತಿರ್ಲಾಪುರ ಕುಡಗೋಲಿನಿಂದ ಕೊಚ್ಚಿ ಹತ್ಯೆ ಮಾಡಿದ್ದ.
ದೊಡ್ಡಪ್ಪನ ಒಂದು ಎಕರೆ ಆಸ್ತಿಗಾಗಿ ಇಬ್ಬರ ನಡುವೆ ಜಗಳ ನಡೆಯುತ್ತಿತ್ತು. ಈ ಜಗಳ ವಿಕೋಪಕ್ಕೆ ತಿರುಗಿ ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿ ರವಿಯನ್ನ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.