ಹುಬ್ಬಳ್ಳಿ:ನಗರದ ಈದ್ಗಾ ಮೈದಾನದಲ್ಲಿ ಗಣೇಶನ ಪ್ರತಿಷ್ಠಾಪನೆ ಮಾಡಲಾಗಿದೆ. ಇಲ್ಲಿಗೆ ಸಾವಿರಾರು ಜನರು ಭೇಟಿ ನೀಡುತ್ತಿದ್ದಾರೆ. ಅದೇ ರೀತಿ ಮುಸ್ಲಿಂ ಬಾಂಧವರು ಸಹ ದೇವರ ದರ್ಶನ ಪಡೆದಿದ್ದಾರೆ.
ಗಜಾನನ ದರ್ಶನಕ್ಕಾಗಿ ಮುಸ್ಲಿಂ ಕುಟುಂಬವೊಂದು ಸರದಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆಯುವ ದೃಶ್ಯ ಕಂಡುಬಂತು. ಹಾಗೆಯೇ, ಇಲ್ಲಿನ ಪೆಂಡಾಲ್ನಲ್ಲಿ ವಿತರಿಸಿದ ಪ್ರಸಾದವನ್ನು ಸ್ವೀಕರಿಸಿದರು. ಇದು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಯಿತು.
ಬಿಜೆಪಿ ಕಾರ್ಯಕರ್ತರಿಂದ ನಿಯಮ ಉಲ್ಲಂಘನೆ:ವೀರ ಸಾರ್ವಕರ್ ಪರ ಜಯಘೋಷ ಕೂಗುವ ಮೂಲಕ ಬಿಜೆಪಿಯ ಕಾರ್ಯಕರ್ತರು ನಿಯಮ ಉಲ್ಲಂಘಿಸಿದ ಘಟನೆ ನಗರದ ರಾಣಿ ಚೆನ್ನಮ್ಮ(ಈದ್ಗಾ) ಮೈದಾನದಲ್ಲಿ ನಡೆದಿದೆ.
ಈದ್ಗಾ ಮೈದಾನದಲ್ಲಿ ಗಣೇಶನ ದರ್ಶನ ಪಡೆದ ಮುಸ್ಲಿಂ ಕುಟುಂಬಸ್ಥರು ಇದೇ ಸ್ಥಳದಲ್ಲಿ ಭಾರತೀಯ ಜನತಾ ಪಕ್ಷದ ಯುವ ಮೋರ್ಚಾ ಕಾರ್ಯಕರ್ತರು ವೀರ ಸಾವರ್ಕರ್ ಅವರ ಪರ ಘೋಷಣೆ ಕೂಗಿದ್ದಾರೆ. ಸುಮಾರು 30 ಕ್ಕೂ ಹೆಚ್ಚು ಧಾರವಾಡ ಬಿಜೆಪಿ ಯುವ ಕಾರ್ಯಕರ್ತರು ವೀರ ಸಾವರ್ಕರ್ ಪರ ಘೋಷಣೆ ಕೂಗುವ ಮೂಲಕ ಹರ್ಷ ವ್ಯಕ್ತಪಡಿಸಿದ್ದಾರೆ. ಈ ಮೂಲಕ ಬಿಜೆಪಿಯ ಕಾರ್ಯಕರ್ತರು ನಿಯಮ ಉಲ್ಲಂಘನೆ ಮಾಡಿದ್ದಾರೆ.
ಓದಿ:ಪಿಎಸ್ಐ ಅಕ್ರಮ : ಎಡಿಜಿಪಿ ಅಮೃತ್ ಪಾಲ್ ನೇತೃತ್ವದಲ್ಲಿ ನಡೆದಿತ್ತಾ WE ARE SAFE ಮೀಟಿಂಗ್?