ಧಾರವಾಡ : ಕಳೆದ 6 ತಿಂಗಳ ಹಿಂದೆ ಶ್ರೀರಾಮಸೇನೆ ಸಂಘಟನೆಯಿಂದ ಮಸೀದಿಯ ಮೇಲೆ ಮೈಕ್ ನಿಷೇಧಿಸಬೇಕು ಎಂಬ ಬಗ್ಗೆ ಸುಪ್ರೀಂಕೋರ್ಟ್ ಆದೇಶದ ಆಧಾರದ ಮೇಲೆ ಶಬ್ದ ಮಾಲಿನ್ಯ ತಡೆಯುವ ವಿಚಾರಕ್ಕಾಗಿ ಮನವಿ ಸಲ್ಲಿಸಿದ್ದೇವೆ. ತಹಶೀಲ್ದಾರ್ ಅವರು ಯಾವುದೇ ಮನ್ನಣೆ ನೀಡಿಲ್ಲ ಎಂದು ಶ್ರೀರಾಮಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆರೋಪಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಶಬ್ದಮಾಲಿನ್ಯ ತಡೆಗಟ್ಟುವ ಇಲಾಖೆಗೆ ಮನವಿ ಕೊಟ್ಟಿದ್ದೇವೆ. ಅವರು ಕ್ಯಾರೇ ಎಂದಿಲ್ಲ, ಮತ್ತೆ ಡಿಸಿ ಅವರಿಗೂ ಮನವಿ ಕೊಡಲಿದ್ದೇವೆ. ಈ ಮೂಲಕ ಸರ್ಕಾರಕ್ಕೆ ಮತ್ತು ಅಧಿಕಾರಿಗಳಿಗೆ ಕೊನೆಯ ಎಚ್ಚರಿಕೆ ಕೊಡಲು ಶ್ರೀರಾಮಸೇನೆ ಸಜ್ಜಾಗಿದೆ ಎಂದರು.