ಧಾರವಾಡ: ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶ ಹಬ್ಬ ಆಚರಿಸುವ ವಿಷಯಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಈ ಬಗ್ಗೆ ಸುಪ್ರೀಂ ಕೋರ್ಟ್ಗೆ ಹೋಗುವ ಅವಶ್ಯಕತೆ ಇರಲಿಲ್ಲ. ಗಣೇಶ ಹಬ್ಬ ಮಾಡಿದ್ರೆ, ಸೌಹಾರ್ದತೆ ಮೂಡುತ್ತಿತ್ತು. ಇವರಿಗೆ ಸೌಹಾರ್ದ ಬೇಡಾಗಿದೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
ಸುಪ್ರೀಂ ಕೋರ್ಟ್ ಆದೇಶವನ್ನು ನಾವು ಸ್ವೀಕಾರ ಮಾಡುತ್ತೇವೆ: ಪ್ರಮೋದ್ ಮುತಾಲಿಕ್ - ಗಣೇಶ ಹಬ್ಬ
ಗಣೇಶ ಹಬ್ಬ ಮಾಡಿದ್ರೆ, ಸೌಹಾರ್ದತೆ ಮೂಡುತ್ತಿತ್ತು. ಇವರಿಗೆ ಸೌಹಾರ್ದ ಬೇಡವಾಗಿದೆ. ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಯಥಾಸ್ಥಿತಿ ಕಾಪಾಡುವಂತೆ ಆದೇಶ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಇದನ್ನು ನಾವು ಸ್ವೀಕಾರ ಮಾಡುತ್ತೇವೆ ಎಂದು ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
ಹುಬ್ಬಳ್ಳಿ ಈದ್ಗಾ ಮೈದಾನ ವಿವಾದ
ಈದ್ಗಾದಲ್ಲಿ ನಮಾಜ್ ಮಾಡಲು ಅಷ್ಟೇ ಅವಕಾಶ ಇದೆ. ಆದ್ರೆ ರಾಷ್ಟ್ರಧ್ವಜ ಸಹ ಹಾರಿಸಲಾಗಿದೆ. ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಯಥಾಸ್ಥಿತಿ ಕಾಪಾಡುವಂತೆ ಆದೇಶ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಇದನ್ನು ನಾವು ಸ್ವೀಕಾರ ಮಾಡುತ್ತೇವೆ. ಆದ್ರೆ ಈ ಸಮಸ್ಯೆ ಸಮಸ್ಯೆಯಾಗೇ ಉಳಿಯಿತು. ವಿವಾದ ವಿವಾದವಾಗಿ ಉಳಿಯಿತು ಎಂದು ಬೇಸರ ವ್ಯಕ್ತಪಡಿಸಿದರು.
ಇದನ್ನೂ ಓದಿ:ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ : ಪಾಲಿಕೆ ಕಮಿಷನರ್ಗೆ ಅಧಿಕಾರ ನೀಡಿದ ಹೈಕೋರ್ಟ್