ಕರ್ನಾಟಕ

karnataka

ETV Bharat / state

ಗಣೇಶೋತ್ಸವ ಆಚರಿಸಬೇಕು ಎನ್ನುವವರಲ್ಲಿ ನಾನು ಒಬ್ಬ: ನಳಿನ್ ಕುಮಾರ್ ಕಟೀಲ್ - ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ ಕುಮಾರ್ ಕಟೀಲ್​

ಸಾರ್ವಜನಿಕ ಗಣೇಶ ಉತ್ಸವ ನಡೆಸಬೇಕು ಎನ್ನುವವರ ಪೈಕಿ ನಾನು ಒಬ್ಬ. ಸರ್ಕಾರ ತಜ್ಞರ ಜೊತೆ ಚರ್ಚೆ ನಡೆಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ ಕುಮಾರ್ ಕಟೀಲ್​ ಹೇಳಿದರು. ಅಲ್ಲದೆ, ಹು-ಧಾ ಪಾಲಿಕೆ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು.

nalin-kumar-kateel-statement-on-ganesh-utsav
ನಳಿನ್ ಕುಮಾರ್ ಕಟೀಲ್

By

Published : Aug 31, 2021, 5:02 PM IST

ಹುಬ್ಬಳ್ಳಿ: ಈ ಬಾರಿ ಸಾರ್ವಜನಿಕ ಗಣೇಶೋತ್ಸವ ಆಚರಿಸಬೇಕು ಎನ್ನುತ್ತಿರುವವರಲ್ಲಿ ನಾನು ಕೂಡ ಒಬ್ಬ ಎಂದು ಭಾರತೀಯ ಜನತಾ ಪಾರ್ಟಿ ರಾಜ್ಯಾಧ್ಯಕ್ಷ ನಳಿನ್​ ಕುಮಾರ್​ ಕಟೀಲ್​​ ಅಭಿಪ್ರಾಯ ವ್ಯಕ್ತಪಡಿಸಿದರು.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಾರ್ವಜನಿಕ ಗಣೇಶೋತ್ಸವ ಆಚರಿಸಬೇಕು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ. ನಮ್ಮ ಪರಂಪರೆ ಜೊತೆ ಜನರ ಪ್ರಾಣವೂ ಅಷ್ಟೇ ಮುಖ್ಯ. ಸರ್ಕಾರ ಈಗ ತಜ್ಞರ ಅಭಿಪ್ರಾಯ ಪಡೆಯುತ್ತಿದೆ. ಅವರ ಅಭಿಪ್ರಾಯ ಪಡೆದು ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ತಿಳಿಸಿದರು.

ಗಣೇಶೋತ್ಸವ ಕುರಿತು ನಳಿನ್​ ಕುಮಾರ್​ ಕಟೀಲ್​ ಹೇಳಿಕೆ

60ಕ್ಕೂ ಹೆಚ್ಚು ಸ್ಥಾನಗಳನ್ನು​ ಗೆಲ್ಲಲಿದ್ದೇವೆ

ಹುಬ್ಬಳ್ಳಿ - ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ 60ಕ್ಕೂ ಹೆಚ್ಚು ಸೀಟ್​ಗಳನ್ನ ಗೆಲ್ಲಲಿದ್ದೇವೆ. ಕೇಂದ್ರ, ರಾಜ್ಯ ಮತ್ತು ಪಾಲಿಕೆಯಲ್ಲೂ ನಾವೇ ಅಧಿಕಾರಕ್ಕೆ ಬರ್ತೀವಿ. ಮುಂದಿನ 5 ವರ್ಷಗಳಲ್ಲಿ ಎಲ್ಲ ಕಾಮಗಾರಿಗಳು ಪೂರ್ಣಗೊಳ್ಳಲಿವೆ. ಸಿದ್ದರಾಮಣ್ಣ ಅವರ ಸರ್ಕಾರ ಇದ್ದಾಗ ಎರಡು ವರ್ಷ ಹಣ ಪೆಂಡಿಂಗ್ ಇತ್ತು. ಅಭಿವೃದ್ಧಿ ಕಾರ್ಯಗಳು ಈಗ ಆರಂಭವಾಗಿವೆ. ರಸ್ತೆಗಳ ಕಾಮಗಾರಿ ಈಗ ಆರಂಭ ಆಗಿದೆ. ಈ ಹಿಂದೆ ಯುಪಿಎ ಸರ್ಕಾರ ಇದ್ದಾಗ ಪೆಂಡಿಂಗ್ ಇಟ್ಟಿದ್ರು. ಆದ್ರೆ ಈ ಬಾರಿ ಎಲ್ಲವೂ ಕ್ಲಿಯರ್ ಆಗಿವೆ ಎಂದು ನಳಿನ್​ ಕುಮಾರ್​ ತಿಳಿಸಿದರು.

ಬಂಡಾಯ ಅಭ್ಯರ್ಥಿಗಳ ವಿರುದ್ಧ ಶಿಸ್ತಿನ ಕ್ರಮ :ಪಕ್ಷದಿಂದ ಬಂಡಾಯ ಎದ್ದಿರುವವರ ವಿರುದ್ಧ ಶಿಸ್ತಿನ ಕ್ರಮ ಕೈಗೊಂಡಿದ್ದೇವೆ. ಮುಂದೆಯೂ ಪಕ್ಷ ವಿರೋಧಿ ಕೆಲಸ ಮಾಡುವವರ ಮೇಲೆ ಕ್ರಮ ಕೈಗೊಳ್ಳುತ್ತೇವೆ ಎಂದು ಕಟೀಲ್​​ ಎಚ್ಚರಿಕೆ ನೀಡಿದರು.

ABOUT THE AUTHOR

...view details