ಧಾರವಾಡ :ಜಿಲ್ಲೆಯಲ್ಲಿ ರಾಷ್ಟ್ರೀಯ ಯುವಜನೋತ್ಸವ ಹಿನ್ನೆಲೆಯಲ್ಲಿ ಕರ್ನಾಟಕ ವಿಶ್ವವಿದ್ಯಾಲಯಕ್ಕೆ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಲಾಗಿದೆ. ಕೆಸಿಡಿ ಕಾಲೇಜು ಮೈದಾನದಲ್ಲಿ ಜ.12ರಿಂದ 16ರವರೆಗೆ ಯುವಜನೋತ್ಸವ ಕಾರ್ಯಕ್ರಮ ನಡೆಯಲಿದ್ದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ.
ವಿವಿಧ ರಾಜ್ಯಗಳಿಂದ 7 ಸಾವಿರಕ್ಕೂ ಅಧಿಕ ಜನ ಭಾಗಿಯಾಗುವ ನಿರೀಕ್ಷೆಯಿದ್ದು ವಸತಿ ಸೌಕರ್ಯಕ್ಕಾಗಿ ವಿದ್ಯಾರ್ಥಿಗಳಿಗೆ ರಜೆ ಘೋಷಿಸಲಾಗಿದೆ. ವಿವಿ ಕ್ಯಾಂಪಸ್ ಹಾಗೂ ಕೆಸಿಡಿ ಕಾಲೇಜು ಸೇರಿದಂತೆ ವಿವಿ ವ್ಯಾಪ್ತಿಯ ಕಾಲೇಜು, ಸಮಾಜ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತ ಇಲಾಖೆ, ಅಗ್ರಿಕಲ್ಚರ್ ಕಾಲೇಜು ಹಾಸ್ಟೆಲ್‌ಗಳಲ್ಲಿ ವಸತಿ ವ್ಯವಸ್ಥೆ ಮಾಡಲಾಗಿದೆ.