ನವಲಗುಂದ:ಕೊರೊನಾ ವೈರಸ್ ಧಾರವಾಡ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ನವಲಗುಂದ ತಾಲೂಕಿನಲ್ಲಿ ಕೋವಿಡ್ ಪಾಸಿಟಿವ್ ಕೇಸ್ಗಳು ಹೆಚ್ಚಾಗಿ ಕಂಡುಬರುತ್ತಿವೆ.
ಜನತೆಗೆ ಕೋವಿಡ್ ಮುಂಜಾಗ್ರತಾ ಕ್ರಮಗಳ ಅರಿವು ಮೂಡಿಸಿ: ನವಲಗುಂದ ಶಾಸಕ - ಕೊರೊನಾ ವೈರಸ್
ನವಲಗುಂದ ಶಾಸಕ ಶಂಕರ ಪಾಟೀಲ್ ಮುನೇನಕೊಪ್ಪ ಅವರು ಕೊರೊನಾ ಸೋಂಕು ಹರಡದಂತೆ ನಗರದಲ್ಲಿ ಕೈಗೊಳ್ಳಲಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು
ಕೋವಿಡ್
ಶಾಸಕ ಶಂಕರ ಪಾಟೀಲ್ ಮುನೇನಕೊಪ್ಪ ಅವರು ಕೊರೊನಾ ಸೋಂಕು ಹರಡದಂತೆ ನಗರದಲ್ಲಿ ಕೈಗೊಳ್ಳಲಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.
ಸರ್ಕಾರ ಜಾರಿಗೊಳಿಸಿರುವ ಕೋವಿಡ್-19 ನಿಯಮಗಳು ಹಾಗೂ ಮುಂಜಾಗ್ರತಾ ಕ್ರಮಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಸೂಚಿಸಿದರು. ಪುರಸಭೆ, ಪೊಲೀಸ್ ಅಧಿಕಾರಿಗಳು ಹಾಗೂ ತಾಲೂಕಿನ ಎಲ್ಲ ಅಧಿಕಾರಿ ವರ್ಗದವರು ಇದ್ದರು.