ಕರ್ನಾಟಕ

karnataka

ETV Bharat / state

ನಿರ್ಭಯಾ ಅತ್ಯಾಚಾರ ಆರೋಪಿಗಳಿಗೆ ಗಲ್ಲು ಶಿಕ್ಷೆ ಸ್ವಾಗತಾರ್ಹ: ಬಿ.ಎಸ್.ಯಡಿಯೂರಪ್ಪ - Nirbhaya rape convicts hangiging is welcome

ನಿರ್ಭಯಾ ಅತ್ಯಾಚಾರ ಆರೋಪಿಗಳಿಗೆ ಸುಪ್ರೀಂಕೋರ್ಟ್ ಗಲ್ಲು ಶಿಕ್ಷೆ ವಿಧಿಸಿದ್ದು ಸ್ವಾಗತಾರ್ಹ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

hubli
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾತನಾಡಿದರು.

By

Published : Dec 18, 2019, 2:45 PM IST

ಹುಬ್ಬಳ್ಳಿ:ನಿರ್ಭಯಾ ಅತ್ಯಾಚಾರ ಆರೋಪಿಗಳಿಗೆ ಸುಪ್ರೀಂಕೋರ್ಟ್ ಗಲ್ಲು ಶಿಕ್ಷೆ ವಿಧಿಸಿದ್ದು ಸ್ವಾಗತಾರ್ಹ ವಿಚಾರ. ಇಂತಹ ಕೃತ್ಯಗಳಲ್ಲಿ ಭಾಗಿಯಾಗುವವರಿಗೆ ಇದೊಂದು ಎಚ್ಚರಿಕೆಯ ಗಂಟೆ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದರು.

ನಗರದ ವಿಮಾನ ನಿಲ್ದಾಣದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರದಲ್ಲಿ ನೀರಾವರಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ. ರೈತರ ಹೊಲಕ್ಕೆ ನೀರು ಹರಿಸುವುದು ಹಾಗೂ ರೈತರು ಬೆಳೆದ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನೀಡಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂಬ ಭರವಸೆ ನೀಡಿದರು.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಸಚಿವ ಸಂಪುಟ ವಿಸ್ತರಣೆ ಕುರಿತು ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಪಕ್ಷಕ್ಕೆ ಬೆಂಬಲ ನೀಡಿ ಗೆದ್ದ ಎಲ್ಲರಿಗೂ ಸಚಿವ ಸ್ಥಾನ ನೀಡುತ್ತೇನೆ ಎಂದು ಹೇಳಿದ್ದೆ. ಈಗಲೂ ಕೂಡ ಆ ಹೇಳಿಕೆಗೆ ಬದ್ಧನಾಗಿದ್ದೇನೆ‌. ಸಚಿವ ಸಂಪುಟ ವಿಸ್ತರಣೆ ಹಾಗೂ ಖಾತೆ ಹಂಚಿಕೆ ಕುರಿತಂತೆ ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಅವರನ್ನು ಭೇಟಿಯಾಗಿ ಚರ್ಚೆ ನಡೆಸುತ್ತೇನೆ ಎಂದು ಅವರು ಹೇಳಿದರು.

ಜನವರಿ 2 ರಂದು ಪ್ರಧಾನಿ ಮೋದಿಯವರು ಬೆಂಗಳೂರಿಗೆ ಆಗಮಿಸಲಿದ್ದಾರೆ. ಅಂದು ಮಹದಾಯಿ ಯೋಜನೆ ಅನುಷ್ಟಾನದ ಕುರಿತು ಸಮಾಲೋಚನೆ ನಡೆಸಲಾಗುತ್ತದೆ ಎಂದ ಅವರು, ರಾಜ್ಯದಲ್ಲಿ ಪೌರತ್ವ ಕಾಯಿದೆ ಜಾರಿಗೆ ತರುತ್ತೇವೆ ಅದರಲ್ಲಿ ಯಾವುದೇ ಅನುಮಾನ ಬೇಡ ಎಂದು ಸ್ಪಷ್ಟ ಪಡಿಸಿದರು.

ABOUT THE AUTHOR

...view details