ಕರ್ನಾಟಕ

karnataka

ETV Bharat / state

ಸಿಎಂ ಬದಲಾವಣೆ: ಮಾಧ್ಯಮದವರ ಎಲ್ಲ ಪ್ರಶ್ನೆಗೂ 'ನೋ ಕಾಮೆಂಟ್ಸ್' ಎಂದ ಬೆಲ್ಲದ - 'No comments' on leadership change

ರಾಜಕೀಯಕ್ಕೆ ಸಂಬಂಧಿಸಿದ ಪ್ರಶ್ನೆಗಳಿಗೆ ಉತ್ತರಿಸಲ್ಲ. ಈ ಬಗ್ಗೆ ಪಕ್ಷದ ವೇದಿಕೆಯಲ್ಲಿ ಮಾತನಾಡುತ್ತೇನೆ ಎಂದು ಬಿಜೆಪಿ ಶಾಸಕ ಅರವಿಂದ ಬೆಲ್ಲದ ಮಾಧ್ಯಮದವರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ್ದಾರೆ.

BJP MLA Aravind Bellad
ಬಿಜೆಪಿ ಶಾಸಕ ಅರವಿಂದ ಬೆಲ್ಲದ

By

Published : Jun 21, 2021, 9:28 AM IST

ಧಾರವಾಡ:ನಾಯಕತ್ವ ಬದಲಾವಣೆ ವಿಚಾರದಲ್ಲಿ ರೆಬೆಲ್ ಆಗಿದ್ದ ಧಾರವಾಡದ ಬಿಜೆಪಿ ಶಾಸಕ ಅರವಿಂದ ಬೆಲ್ಲದ ಮೌನವಾಗಿದ್ದಾರೆ. ಮಾಧ್ಯಮದವರ ಎಲ್ಲ ಪ್ರಶ್ನೆಗಳಿಗೂ ಅವರು 'ನೋ ಕಾಮೆಂಟ್ಸ್' ಎಂದರು.

ಶಾಸಕ ಅರವಿಂದ ಬೆಲ್ಲದ ಪ್ರತಿಕ್ರಿಯೆ

ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯಕ್ಕೆ ಸಂಬಂಧಿಸಿದ ಪ್ರಶ್ನೆಗಳಿಗೆ ಉತ್ತರಿಸಲ್ಲ. ಈ ಬಗ್ಗೆ ಪಕ್ಷದ ವೇದಿಕೆಯಲ್ಲಿ ಮಾತನಾಡುತ್ತೇನೆ. ನಿನ್ನೆ ಸುತ್ತೂರು ಶ್ರೀಗಳ ಭೇಟಿ ವಿಚಾರಕ್ಕೆ ಪ್ರತಿಕ್ರಿಯಿಸಿ ಶ್ರೀಗಳ ತಾಯಿ ನಿಧನರಾಗಿದ್ದರು. ಅದಕ್ಕೆ ಶ್ರೀಗಳನ್ನು ಭೇಟಿಯಾಗಲು ಹೋಗಿದ್ದೆ ಎಂದು ಹೇಳಿದರು.

ಇದನ್ನೂ ಓದಿ:ಸುತ್ತೂರು ಶ್ರೀ ಭೇಟಿ ಮಾಡಿದ ಅರವಿಂದ ಬೆಲ್ಲದ

ABOUT THE AUTHOR

...view details