ಹುಬ್ಬಳ್ಳಿ:ಯಾವ ಜಿಲ್ಲೆಯ ಉಸ್ತುವಾರಿ ನೀಡಿದರೂ ಜವಾಬ್ದಾರಿಯಿಂದ ನಿರ್ವಹಿಸುತ್ತೇನೆ. ಬೆಳಗಾವಿಗೆ ಕೊಟ್ಟರೆ ಬೆಳಗಾವಿಗೆ ಹೋಗುತ್ತೇನೆ. ಧಾರವಾಡದಲ್ಲಿ ಕೊಟ್ಟರೇ ಧಾರವಾಡಕ್ಕೆ ಹೋಗುತ್ತೇನೆ. ಅದು ಮುಖ್ಯಮಂತ್ರಿಗಳಿಗೆ ಬಿಟ್ಟ ಪರಮಾಧಿಕಾರ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಆದಷ್ಟು ಬೇಗ ಕಳಸಾ-ಬಂಡೂರಿ ಯೋಜನೆ ಜಾರಿಗೆ ಯತ್ನಿಸ್ತಾರಂತೆ ಸಚಿವ ಶೆಟ್ಟರ್.. - ಕರ್ನಾಟಕ, ಗೋವಾ, ಮಹಾರಾಷ್ಟ್ರ ಸರ್ಕಾರಗಳು ಸುಪ್ರೀಂಕೋರ್ಟ್‌ಗೆ ಮೇಲ್ಮನವಿ
ರಾಜ್ಯದ ವಕೀಲರು, ಕಾನೂನು ತಜ್ಞರ ಜತೆ ಚರ್ಚಿಸುತ್ತೇವೆ. ಸುಪ್ರೀಂಕೋರ್ಟ್ ನಿರ್ದೇಶನ ನೋಡಿ ಮುಂದಿನ ಕ್ರಮಕೈಗೊಳ್ಳಲಾಗುವುದು. ಆದಷ್ಟು ಬೇಗ ನೋಟಿಫಿಕೇಶನ್ ಹೊರಡಿಸಲು ಪ್ರಯತ್ನಿಸಲಾಗುವುದು ಎಂದ ಅವರು, ಕೆಲ ಆಂತರಿಕ ಬೆಳವಣಿಗೆಗಳು ನಡೆಯುತ್ತಿವೆ. ಎಲ್ಲವನ್ನೂ ಬಹಿರಂಗವಾಗಿ ಚರ್ಚಿಸಲು ಆಗಲ್ಲ ಎಂದರು.
ನಗರದಲ್ಲಿಂದು ಮಾತನಾಡಿದ ಅವರು, ಮಹದಾಯಿ ಮತ್ತು ಕಳಸಾ-ಬಂಡೂರಿ ಯೋಜನೆಯನ್ನು ಆದಷ್ಟು ಬೇಗ ಜಾರಿಗೊಳಿಸಲು ಪ್ರಯತ್ನಿಸುತ್ತಿದ್ದೇವೆ. ಕರ್ನಾಟಕ, ಗೋವಾ, ಮಹಾರಾಷ್ಟ್ರ ಸರ್ಕಾರಗಳು ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿವೆ. ಪ್ರಕರಣ ನ್ಯಾಯಾಲಯದಲ್ಲಿರುವಾಗ ಅಧಿಸೂಚನೆ ಹೊರಡಿಸಲು ಬರಲ್ಲ. ಕೇಂದ್ರದಲ್ಲಿ ಯಾವ ಸರ್ಕಾರವಿದ್ದರೂ ಹೀಗೆ ಹೇಳುತ್ತಿದ್ದವು ಎಂದರು.