ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷವನ್ನು ಅಳಿಸಲು ಯಾರಿಂದಲೂ ಸಾಧ್ಯವಿಲ್ಲ. ಪಕ್ಷವು ಮತ್ತೆ ಪುಟಿದೆದ್ದು ದೇಶ ಮತ್ತು ರಾಜ್ಯದಲ್ಲಿ ಅಧಿಕಾರಕ್ಕೆ ಬರುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ನಗರದ ಗೋಕುಲ ಗಾರ್ಡ್ನಲ್ಲಿ ಮಧು ಬಂಗಾರಪ್ಪ ಅವರನ್ನು ಅಧಿಕೃತವಾಗಿ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ಮಾತನಾಡಿದ ಅವರು, ಬಂಗಾರಪ್ಪ ನನ್ನ ರಾಜಕೀಯ ಗುರು. ಅವರ ಗರಡಿಯಲ್ಲಿ ನಾವು ಬೆಳೆದವರು. ಅವರ ಪುತ್ರನನ್ನು ನನ್ನ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತಿರುವುದು ಖುಷಿ ತಂದಿದೆ. ಮಧು ಬಂಗಾರಪ್ಪ ಅವರು ವ್ಯಕ್ತಿ ಅಲ್ಲ, ಅವರೊಬ್ಬ ಶಕ್ತಿಯಾಗಿ ಕಾಂಗ್ರೆಸ್ ಪಕ್ಷ ಸೇರಿದ್ದಾರೆ ಎಂದರು.