ಕರ್ನಾಟಕ

karnataka

ETV Bharat / state

ಸಿಎಂ ಬದಲಾವಣೆ ವಿಚಾರವಾಗಿ ಯಾವುದೇ ಸಹಿ ಸಂಗ್ರಹ ನಡೆಯುತ್ತಿಲ್ಲ: ಪ್ರಹ್ಲಾದ್ ಜೋಶಿ - Dharwad

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕೇವಲ‌ ಊಹಾಪೋಹ ಅಷ್ಟೇ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸ್ಪಷ್ಟಪಡಿಸಿದರು.

Union Minister Prahlad Joshi
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

By

Published : Jun 7, 2021, 2:12 PM IST

ಧಾರವಾಡ: ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಯಾವುದೇ ಸಹಿ ಸಂಗ್ರಹ ನಡೆಯುತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸ್ಪಷ್ಟಪಡಿಸಿದ್ದಾರೆ.

ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ಯಾವುದೇ ಸಿಎಂ ಬದಲಾವಣೆ ವಿಚಾರ ನಡೆದಿಲ್ಲ. ಮೋದಿಯವರ ನೇತೃತ್ವದಲ್ಲಿ ನಾವು ಕೆಲಸ ಮಾಡುತ್ತಿದ್ದೇನೆ. ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕೇವಲ‌ ಊಹಾಪೋಹ ಅಷ್ಟೇ. ಮುಖ್ಯಮಂತ್ರಿ ಯಡಿಯೂರಪ್ಪ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ ಎಂದರು.

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ

ಹೈಕಮಾಂಡ್​​ ಒಪ್ಪಿದರೆ ನಾನು ರಾಜೀನಾಮೆ ಕೊಡುವೆ ಮುಖ್ಯಮಂತ್ರಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, ನಿನ್ನೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಸಿಎಂ ಸಾಂದರ್ಭಿಕವಾಗಿ ಉತ್ತರ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಹೇಳಿಕೆಯನ್ನು ಸಮರ್ಥಿಸಿಕೊಂಡರು. ಮಾಧ್ಯಮದವರು ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿದ್ದಾರೆ. ಅವರನ್ನು ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ. ಅವರು ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ ಎಂದು ಪ್ರಹ್ಲಾದ್ ಜೋಶಿ ತಿಳಿಸಿದರು.

ಇದನ್ನೂ ಓದಿ:ಇಳಿವಯಸ್ಸಲ್ಲಿ ಬಿಎಸ್​​ವೈ ಹೊಸ ದಾಳ: ಸ್ವಪಕ್ಷೀಯ ವಿರೋಧಿಗಳಿಗೆ ಟಕ್ಕರ್ ನೀಡಿ ಕುರ್ಚಿ ಭದ್ರಪಡಿಸಿಕೊಂಡ್ರಾ ಸಿಎಂ?

ABOUT THE AUTHOR

...view details