ಹುಬ್ಬಳ್ಳಿ:ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರ ಈ ಬಾರಿಯ ಚುನಾವಣೆಯಲ್ಲಿ ಹೆಚ್ಚು ಸುದ್ದಿಯಾಗಿದೆ. ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರಿಗೆ ಬಿಜೆಪಿ ಟಿಕೆಟ್ ತಪ್ಪಿದ್ದು, ಮತ್ತು ನಂತರ ಅವರು ಪಕ್ಷದ ವಿರುದ್ಧ ಮುನಿಸಿಕೊಂಡು ಕಾಂಗ್ರೆಸ್ ಸೇರಿದ್ದು ರಾಜ್ಯ ರಾಜಕೀಯದಲ್ಲಿ ಹೆಚ್ಚು ಸದ್ದು ಮಾಡಿತ್ತು. ಅಲ್ಲದೆ, ಕಾಂಗ್ರೆಸ್ ಅಭ್ಯರ್ಥಿಯಾಗಿ ಅದೇ ಅಖಾಡದಿಂದ ಶೆಟ್ಟರ್ ಸ್ಪರ್ಧೆಗಿಳಿದಿದ್ದಾರೆ. ಈ ನಡುವೆ ಕಾಂಗ್ರೆಸ್ ಟಿಕೆಟ್ ಅಕಾಂಕ್ಷಿ ಆಗಿದ್ದ ಅಲ್ತಾಫ್ ಕಿತ್ತೂರು ಅವರು ಬಂಡಾಯ ಎದ್ದಿದ್ದರಿಂದಲೂ ಈ ಕ್ಷೇತ್ರದ ರಾಜಕೀಯ ಬೆಳವಣಿಗೆ ಚರ್ಚೆ ಆಗಿದ್ದು ಗೊತ್ತೇ ಇದೆ. ಈ ಮಧ್ಯೆ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಅಲ್ತಾಫ್ ಕಿತ್ತೂರು ಅವರು, ಇಂದು ತಮ್ಮ ಉಮೇದುವಾರಿಕೆಯನ್ನು ವಾಪಸ್ ಪಡೆದಿದ್ದಾರೆ. ಮಾಜಿ ಸಿಎಂ ಜಗದೀಶ್ ಶೆಟ್ಟರ್ ವಿರುದ್ಧ ಕಾಂಗ್ರೆಸ್ನ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಅವರು ಪಕ್ಷದ ನಾಯಕರ ಮನವೊಲಿಕೆಗೆ ಮಣಿದಿದ್ದಾರೆ.
ಇದನ್ನೂ ಓದಿ:ಅಗತ್ಯ ಸೇವೆಯಡಿ ಬರುವ ಗೈರು ಹಾಜರಿ ಮತದಾರರಿಗೆ ಪೋಸ್ಟಲ್ ವೋಟಿಂಗ್ ಸೆಂಟರ್
ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆ ಹಾಗೂ ಮುಸ್ಲಿಂ ಅಭ್ಯರ್ಥಿಗಳಿಗೆ ಈ ಬಾರಿ ಅವಕಾಶ ನೀಡಬೇಕು ಎಂದು ಒತ್ತಾಯಿಸಿ ಅಲ್ತಾಫ್ ಕಿತ್ತೂರು ಕಾಂಗ್ರೆಸ್ನ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದರು.
ಇದನ್ನೂ ಓದಿ:ಗೋಕಾಕ್ನಲ್ಲಿ ಈ ಬಾರಿ ಮೌನ ಕ್ರಾಂತಿಯಾಗಲಿದೆ: ಮಾಜಿ ಡಿಸಿಎಂ ಲಕ್ಷ್ಮಣ ಸವದಿ