ಕರ್ನಾಟಕ

karnataka

ETV Bharat / state

ಸರ್ಕಾರದ ನಿಯಮ ಉಲ್ಲಂಘಿಸಿ ಟಿಪ್ಪು ಜಯಂತಿ ಆಚರಣೆ: ಹುಧಾ ಪಾಲಿಕೆ ವಿರೋಧ ಪಕ್ಷದ ನಾಯಕರಿಗೆ ನೋಟಿಸ್ - ಟಿಪ್ಪು ಜಯಂತಿ

ಸರ್ಕಾರದ ನಿಯಮ ಉಲ್ಲಂಘಿಸಿ ಟಿಪ್ಪು ಜಯಂತಿ ಆಚರಿಸಿದ ಹುಧಾ ಪಾಲಿಕೆಯ ವಿರೋಧ ಪಕ್ಷದ ನಾಯಕರಿಗೆ ಕಾರಣ ಕೇಳಿ ನೋಟಿಸ್ ಜಾರಿಗೊಳಿಸಲಾಗಿದೆ.

ಟಿಪ್ಪು ಜಯಂತಿ ಆಚರಣೆ
ಟಿಪ್ಪು ಜಯಂತಿ ಆಚರಣೆ

By

Published : Nov 10, 2022, 7:35 PM IST

ಹುಬ್ಬಳ್ಳಿ:ಸರ್ಕಾರದ ನಿಯಮ ಉಲ್ಲಂಘಿಸಿ ಮಹಾನಗರ ಪಾಲಿಕೆ ಕಚೇರಿಯಲ್ಲಿ ಟಿಪ್ಪು ಜಯಂತಿ ಆಚರಣೆ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕ ದೊರೈರಾಜ ಮಣಿಕುಂಟ್ಲ ಅವರಿಗೆ ನೋಟಿಸ್ ಜಾರಿ ಮಾಡಲಾಗಿದೆ.

ಟಿಪ್ಪು ಜಯಂತಿಯನ್ನು ಸರ್ಕಾರ ರದ್ದು ಮಾಡಿದೆ. ಸರ್ಕಾರದ ಕಚೇರಿಗಳಲ್ಲಿ ಯಾವುದೇ ರೀತಿಯ ಆಚರಣೆ ಮಾಡದಂತೆ ಸರ್ಕಾರ ಆದೇಶ ಹೊರಡಿಸಿದೆ‌. ಆದ್ರೆ ಇಂದು ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕ ದೊರೈರಾಜ ಮಣಿಕುಂಟ್ಲಾ ಅವರ ಪಾಲಿಕೆಯ ಕಚೇರಿಯಲ್ಲಿ ಟಿಪ್ಪು ಜಯಂತಿ ಆಚರಣೆ ಮಾಡಿದ್ದಾರೆ. ಈ ಹಿನ್ನೆಲೆ ಕಾರಣ ಕೇಳಿ ಪಾಲಿಕೆ ಪರಿಷತ್ ಕಾರ್ಯದರ್ಶಿಗಳು ಪಾಲಿಕೆ ವಿಪ್ ನಾಯಕರಿಗೆ ನೋಟಿಸ್ ಜಾರಿ ಮಾಡಿದ್ದಾರೆ.

ಹುಧಾ ಪಾಲಿಕೆ ವಿರೋಧ ಪಕ್ಷದ ನಾಯಕರಿಗೆ ನೋಟಿಸ್

ಸರ್ಕಾರಿ ಕಚೇರಿಗಳಲ್ಲಿ ಟಿಪ್ಪು ಜಯಂತಿ ಆಚರಣೆ ನಿಷೇಧ ಇದ್ರೂ ವಿರೋಧ ಪಕ್ಷದ ಸದಸ್ಯರಿಂದ ಟಿಪ್ಪು ಸುಲ್ತಾನ್ ಜಯಂತಿ ಆಚರಿಸುವ, ಸರ್ಕಾರದ ಆದೇಶ ಉಲ್ಲಂಘಿಸಲಾಗಿದೆ‌. ಮೂರು ದಿನಗಳೊಳಗೆ ಮಹಾಪೌರ ವಿರೇಶ ಅಂಚಟಗೇರಿ ಅವರಿಗೆ ಸೂಕ್ತ ಉತ್ತರ ನೀಡುವಂತೆ ಪಾಲಿಕೆ ಪರಿಷತ್ ಕಾರ್ಯದರ್ಶಿ ನೋಟಿಸ್ ಮಾಡಿದ್ದಾರೆ.

(ಓದಿ: ಸರ್ಕಾರದ ಆದೇಶ ಉಲ್ಲಂಘಿಸಿ ಹು-ಧಾ ಮಹಾನಗರ ಪಾಲಿಕೆಯಲ್ಲಿ ಟಿಪ್ಪು ಜಯಂತಿ ಆಚರಣೆ)

ABOUT THE AUTHOR

...view details