ಧಾರವಾಡ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವ್ಯಕ್ತಿಗತ ಟೀಕೆ ಮಾಡಿದ ಹಿನ್ನೆಲೆ ರಾಜಸ್ಥಾನದ ಮಾಜಿ ರಾಜ್ಯಪಾಲೆ, ಕಾಂಗ್ರೆಸ್ ಮುಖಂಡೆ ಮಾರ್ಗರೇಟ್ ಆಳ್ವಾಗೆ ನೋಟಿಸ್ ಜಾರಿ ಮಾಡಲಾಗಿದೆ.
ಪ್ರಧಾನಿ ವಿರುದ್ಧ ವ್ಯಕ್ತಿಗತ ಟೀಕೆ ಆರೋಪ: ಮಾರ್ಗರೇಟ್ ಆಳ್ವಾಗೆ ನೋಟಿಸ್ - ನೋಟೀಸ್
ನರೇಂದ್ರ ಮೋದಿ ವಿರುದ್ಧ ವ್ಯಕ್ತಿಗತ ಟೀಕೆ ಮಾಡಿದ ಹಿನ್ನೆಲೆ ಕಾಂಗ್ರೆಸ್ ಮುಖಂಡೆ ಮಾರ್ಗರೇಟ್ ಆಳ್ವಾಗೆ ಧಾರವಾಡ ಡಿಸಿ ದೀಪಾ ಚೋಳನ್ ನೋಟಿಸ್ ಜಾರಿ ಮಾಡಿದ್ದಾರೆ.
ಮಾರ್ಗರೇಟ್ ಆಳ್ವಾಗೆ ನೋಟೀಸ್
ಚುನಾವಣಾ ಆಯೋಗದ ಸೂಚನೆ ಮೇರೆಗೆ ಜಿಲ್ಲಾಧಿಕಾರಿ ದೀಪಾ ಚೋಳನ್ ಅವರು ನೋಟಿಸ್ ಜಾರಿ ಮಾಡಿದ್ದಾರೆ. ಹುಬ್ಬಳ್ಳಿಯಲ್ಲಿ ನಡೆದಿದ್ದ ಕಾಂಗ್ರೆಸ್ ಸಮಾವೇಶದಲ್ಲಿ ಮಾರ್ಗರೇಟ್ ಆಳ್ವಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವ್ಯಕ್ತಿಗತ ಟೀಕೆ ಮಾಡಿದ್ದರು ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ಜಿಲ್ಲಾ ಚುನಾವಣಾಧಿಕಾರಿಯಾಗಿರುವ ದೀಪಾ ಚೋಳನ್ ಅವರು ನೋಟಿಸ್ ಜಾರಿ ಮಾಡಿದ್ದಾರೆ.