ಹುಬ್ಬಳ್ಳಿ:ವಿಧಾನಸಭೆ ಚುನಾವಣೆಯ ಮಾದರಿ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಸಾರಿಗೆ ಸಂಸ್ಥೆಯ ಅನಧಿಕೃತವಾಗಿ ಹಣ, ನಿರ್ಬಂಧಿತ ವಸ್ತುಗಳ ಸಾಗಾಣಿಕೆಗೆ ಅವಕಾಶ ನೀಡದಂತೆ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸಾರಿಗೆ ಸಿಬ್ಬಂದಿಗೆ ನಿರ್ದೇಶನಗಳನ್ನು ನೀಡಲಾಗಿದೆ.
ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಾಗಿದೆ. ಖಾಸಗಿ ವಾಹನಗಳಂತೆ ಕೆಲವರು ಸಾರಿಗೆ ಸಂಸ್ಥೆಯ ಬಸ್ಗಳಲ್ಲಿಯೂ ಸಹ ಅನಧಿಕೃತವಾಗಿ ಹಣ ಹಾಗೂ ನಿರ್ಬಂಧಿತ ವಸ್ತುಗಳನ್ನು ಸಾಗಾಣಿಕೆ ಮಾಡುವ ಸಾಧ್ಯತೆಗಳಿರುತ್ತವೆ. ಅಂತಹ ಯಾವುದೇ ರೀತಿಯ ಕಾನೂನು ಬಾಹಿರ ಸಾಗಾಣಿಕೆಗೆ ಅವಕಾಶ ನೀಡದಂತೆ ಚಾಲಕರು, ನಿರ್ವಾಹಕರು, ಬಸ್ ನಿಲ್ದಾಣದ ಅಧಿಕಾರಿಗಳು ಹಾಗೂ ಕಾರ್ಗೋ ಕೌಂಟರ್ಗಳ ಸಿಬ್ಬಂದಿ ಹೆಚ್ಚಿನ ಜಾಗೃತಿ ವಹಿಸುವಂತೆ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕರು ತಿಳಿಸಿದ್ದಾರೆ.