ಹುಬ್ಬಳ್ಳಿ:ಹಳೇ ಹುಬ್ಬಳ್ಳಿ ಗಲಭೆ ಸಂಬಂಧಿಸಿದಂತೆ ಪೊಲೀಸರು ದಾಖಲಿಸಿಕೊಂಡಿದ್ದ ಪೈಕಿ 11 ಪ್ರಕರಣಗಳಿಗೆ ಹೈಕೋರ್ಟ್ ಪೀಠ, ಮಧ್ಯಂತರ ತಡೆಯಾಜ್ಞೆ ನೀಡಿದೆ. ಹಳೇ ಹುಬ್ಬಳ್ಳಿಯಲ್ಲಿ ಏ. 16ರಂದು ನಡೆದ ಗಲಭೆಗೆ ಸಂಬಂಧಿಸಿ, ಹಳೆಯ ಹುಬ್ಬಳ್ಳಿಯ ಪೊಲೀಸ್ ಠಾಣೆ ಸೇರಿದಂತೆ ಸುತ್ತಿನ ಪ್ರದೇಶದಲ್ಲಿ ಗಲಾಟೆ ಮಾಡಿದ್ದ 157 ಜನರ ವಿರುದ್ಧ 12 ಪ್ರಕರಣ ದಾಖಲಾಗಿವೆ.
ಒಂದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹಲವು ದೂರುಗಳನ್ನು ದಾಖಲಿಸಿಕೊಂಡಿರುವುದು ಸರಿಯಲ್ಲ. ಹೀಗಾಗಿ ಪೊಲೀಸರು ದಾಖಲಿಸಿಕೊಂಡಿರುವ ಪ್ರಕರಣಗಳು ಅನುರ್ಜಿತಗೊಳಿಸಬೇಕು ಎಂದು ಮಹಮ್ಮದ್ ಆರೀಫ್ ನಾಗರಾಳ ಸೇರಿದಂತೆ ಇತರ 157 ಜನರು ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.