ಕರ್ನಾಟಕ

karnataka

ETV Bharat / state

ಫೆ. 2ರಂದು ‌ ಹುಬ್ಬಳ್ಳಿಗೆ ಉಪರಾಷ್ಟ್ರಪತಿ ಭೇಟಿ: ಅಚ್ಚುಕಟ್ಟಾಗಿ ಕೆಲಸ ಮಾಡಲು ಡಿಸಿ ಸೂಚನೆ - On feb 2nd. Vice President visits Hubli

ಫೆ. 2ರಂದು ಹುಬ್ಬಳ್ಳಿಗೆ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರು ಆಗಮಿಸುತ್ತಿದ್ದು,  ವಿವಿಧ ಇಲಾಖೆಗಳ ಅಧಿಕಾರಿಗಳು ಅಚ್ಚುಕಟ್ಟಾಗಿ ನಿಗದಿತ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಪೂರ್ವಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿದರು

Preparatory Meeting in Dharwad
ಉಪರಾಷ್ಟ್ರಪತಿ ಭೇಟಿ ಹಿನ್ನೆಲೆ: ಧಾರವಾಡದಲ್ಲಿ ಪೂರ್ವಸಿದ್ಧತಾ ಸಭೆ

By

Published : Jan 16, 2020, 11:03 PM IST

ಧಾರವಾಡ: ಫೆ. 2ರಂದು ಹುಬ್ಬಳ್ಳಿಗೆ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರು ಆಗಮಿಸುತ್ತಿದ್ದು, ವಿವಿಧ ಇಲಾಖೆಗಳ ಅಧಿಕಾರಿಗಳು ಅಚ್ಚುಕಟ್ಟಾಗಿ ನಿಗದಿತ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ಫೆ.1 ರಂದು ಸಂಜೆ ಹುಬ್ಬಳ್ಳಿಗೆ ಆಗಮಿಸುವ ಉಪರಾಷ್ಟ್ರಪತಿ ಸರ್ಕಿಟ್ ಹೌಸ್‍ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಫೆ. 2 ರಂದು ಬೆಳಿಗ್ಗೆ ದೇಶಪಾಂಡೆ ಫೌಂಡೇಶನ್ ಆಯೋಜಿಸಿರುವ ಸ್ಕಿಲ್ ಇಂಡಿಯಾ ಟ್ರೇನಿಂಗ್ ಸೆಂಟರ್ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು. ಮಧ್ಯಾಹ್ನ ಹುಬ್ಬಳ್ಳಿ-ಧಾರವಾಡ ಬಸ್ ತ್ವರಿತ ಸಾರಿಗೆ ವ್ಯವಸ್ಥೆ (ಎಚ್‍ಡಿಬಿಆರ್​ಟಿಎಸ್) ಸೇವೆಗಳು, ಹೊಸ ಬಸ್‍ಗಳು ಹಾಗೂ ಇಂಟರ್ ಚೇಂಜ್ ವ್ಯವಸ್ಥೆಗೆ ಚಾಲನೆ ನೀಡಿ ಬಳಿಕ ರಾಯ್ಕರ್ ಆವರಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದರು.

ಗಣ್ಯಾತಿಗಣ್ಯರ ಈ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಪಾಲನೆ ಬಹಳ ಮಹತ್ವಾದ್ದಾಗಿರುತ್ತದೆ. ಕಾರ್ಯಕ್ರಮದ ಯಶಸ್ವಿ ಆಯೋಜನೆ ಮತ್ತು ಶಿಷ್ಟಾಚಾರ ಪಾಲನೆಗೆ ವಿವಿಧ ಸಮಿತಿಗಳನ್ನು ರಚಿಸಿ, ಜವಾಬ್ದಾರಿಗಳನ್ನು ನೀಡಲಾಗುವುದು. ಅವರನ್ನು ಬರಮಾಡಿಕೊಳ್ಳುವುದು, ವಾಹನಗಳ ಸಿದ್ಧತೆ, ವಸತಿ, ಭದ್ರತಾ ಕೊಠಡಿ, ವೈದ್ಯಕೀಯ ಸೌಕರ್ಯಗಳು, ತಜ್ಞವೈದ್ಯರ ತಂಡ, ವೇದಿಕೆಯ ಯೋಜನೆ ಸೇರಿದಂತೆ ಎಲ್ಲ ಸಿದ್ಧತೆಗಳು ಅಚ್ಚುಕಟ್ಟಾಗಿ ಇರಬೇಕು. ಅದೇ ದಿನ ರಾಜ್ಯಪಾಲರು, ಮುಖ್ಯಮಂತ್ರಿಗಳು, ಕೇಂದ್ರ ಸಚಿವರು ಹಾಗೂ ರಾಜ್ಯ ಸರ್ಕಾರದ ಅನೇಕ ಸಚಿವರು ಆಗಮಿಸುವುದರಿಂದ ವಾಹನ ಸಂಚಾರದ ಬಗ್ಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಹೇಳಿದರು.

ಸಭೆಯಲ್ಲಿ ‌ಜಿಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಬಿ.ಸಿ.ಸತೀಶ, ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಉಪ ವಿಭಾಗಾಧಿಕಾರಿ ಮಹಮ್ಮದ ಜುಬೇರ, ಸಹಾಯಕ ಪೊಲೀಸ್ ಆಯುಕ್ತ ಎಂ.ಎನ್ ರುದ್ರಪ್ಪ, ಹುಬ್ಬಳ್ಳಿ ವಿಮಾನ ನಿಲ್ದಾಣದ ನಿರ್ದೇಶಕ ಪ್ರಮೋದ ಠಾಕ್ರೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

ABOUT THE AUTHOR

...view details