ಕಲಘಟಗಿ(ಧಾರವಾಡ): ತಾಲೂಕಿನ ಕಾಡನಕೊಪ್ಪ ಗ್ರಾಮದ ವ್ಯಕ್ತಿಯೊಬ್ಬರಿಗೆ ಕೋವಿಡ್ 19 ಸೋಂಕು ತಗಲಿದೆ.
ಕಾಡನಕೊಪ್ಪ ಗ್ರಾಮಕ್ಕೂ ಕಾಲಿಟ್ಟ ಮಹಾಮಾರಿ ಕೊರೊನಾ - ಧಾರವಾಡ ಕೊರೊನಾ ಸುದ್ದಿ
ಕಲಘಟಗಿ ತಾಲೂಕಿನ ಕಾಡನಕೊಪ್ಪ ಗ್ರಾಮದ ವ್ಯಕ್ತಿಯೊಬ್ಬರಿಗೆ ಕೋವಿಡ್ 19 ಸೋಂಕು ತಗಲಿರುವುದು ದೃಢಪಟ್ಟಿದೆ.
Corona
ಗ್ರಾಮದ 46 ವರ್ಷದ ವ್ಯಕ್ತಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಇವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈತನ ಟ್ರಾವೆಲ್ ಹಿಸ್ಟರಿಯನ್ನು ಪೊಲೀಸ್ ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು ಪತ್ತೆ ಹಚ್ಚುತ್ತಿದ್ದಾರೆ.
ಮುಂಜಾಗ್ರತಾ ಕ್ರಮವಾಗಿ ತಾಲೂಕು ಆಡಳಿತ ಕಾಡನಕೊಪ್ಪ ಗ್ರಾಮದ ಸೋಂಕಿತನ ಮನೆಯ ಬೀದಿಯನ್ನು ಸೀಲ್ ಡೌನ್ ಮಾಡಿದೆ.