ಕರ್ನಾಟಕ

karnataka

ETV Bharat / state

ಹುಬ್ಬಳ್ಳಿಯ ತಾರಿಹಾಳ ಬೈಪಾಸ್ ಬಳಿ‌ ಭೀಕರ ರಸ್ತೆ ಅಪಘಾತ: ಓರ್ವ ಸಾವು, ಐವರು ಗಂಭೀರ - bus car collision near tarihal bypass

ಮುಂಬೈಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಹಾಗೂ ಹುಬ್ಬಳ್ಳಿಯಿಂದ‌ ಬೆಳಗಾವಿಗೆ ತೆರಳುತ್ತಿದ್ದ ಕಾರಿನ ನಡುವೆ ಈ ಅಪಘಾತ ಸಂಭವಿಸಿದೆ.

Bus-car accident in hubli
ಹುಬ್ಬಳ್ಳಿಯ ತಾರಿಹಾಳ ಬೈಪಾಸ್ ಬಳಿ‌ ಭೀಕರ ರಸ್ತೆ ಅಪಘಾತ

By

Published : Nov 28, 2021, 10:33 AM IST

ಹುಬ್ಬಳ್ಳಿ: ಖಾಸಗಿ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿದ್ದು, ಕಾರು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿ ಹೊರವಲಯದ ತಾರಿಹಾಳ ಬೈಪಾಸ್ ಬಳಿ‌ ಭಾನುವಾರ ನಡೆದಿದೆ.‌

ಮುಂಬೈಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಹಾಗೂ ಹುಬ್ಬಳ್ಳಿಯಿಂದ‌ ಬೆಳಗಾವಿಗೆ ತೆರಳುತ್ತಿದ್ದ ಕಾರಿನ ನಡುವೆ ಈ ಅಪಘಾತ ಸಂಭವಿಸಿತು. ದುರ್ಘಟನೆಯಲ್ಲಿ ಕಾರು ಚಾಲಕ ಮೃತಪಟ್ಟಿದ್ದಾನೆ. ಕಾರಿನಲ್ಲಿದ್ದ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ

ಕಾರಿನಲ್ಲಿದ್ದವರ ಬಗ್ಗೆ ಯಾವುದೇ ಮಾಹಿತಿ ತಿಳಿದುಬಂದಿಲ್ಲ. ಹುಬ್ಬಳ್ಳಿ ಉತ್ತರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಕಾಲ್ನಡಿಗೆಯಲ್ಲಿ ಸಾಗುತ್ತಿದ್ದ ಭಕ್ತರ ಮೇಲೆ ಹರಿದ ಪಿಕಪ್​ ಟ್ರಕ್​: ನಾಲ್ವರು ಸಾವು, 23 ಮಂದಿಗೆ ಗಾಯ

ABOUT THE AUTHOR

...view details