ಹುಬ್ಬಳ್ಳಿ :ಅತಿ ವೇಗದಿಂದ ಕಾರೊಂದು ಪಲ್ಟಿಯಾಗಿ ಓರ್ವ ಸಾವನ್ನಪ್ಪಿ, ನಾಲ್ವರು ಗಾಯಗೊಂಡಿರುವ ಘಟನೆ ನಗರದ ಹೊರವಲಯದ ರಾಯನಾಳ ಕ್ರಾಸ್ ಬಳಿ ಇಂದು ಬೆಳಗ್ಗೆ ಸಂಭವಿಸಿದೆ.
ಕಾರಿನಲ್ಲಿ ಒಟ್ಟು ಐವರು ಪ್ರಯಾಣಿಸುತ್ತಿದ್ದರು. ಇದರಲ್ಲಿ ಯುವಕನೋರ್ವ ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ. ಗಾಯಗೊಂಡ ನಾಲ್ವರನ್ನು ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.