ಧಾರವಾಡ:ಜಿಲ್ಲೆಯಲ್ಲಿ ಇಂದು ಒಂದು ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದ್ದಾರೆ.
ಧಾರವಾಡದಲ್ಲಿ ಮತ್ತೊಂದು ಕೊರೊನಾ ಪತ್ತೆ: ಸೋಂಕಿತರ ಸಂಖ್ಯೆ 34ಕ್ಕೆ ಏರಿಕೆ - ಧಾರವಾಡ ಲೆಟೆಸ್ಟ್ ನ್ಯೂಸ್
ಇಂದು ಹೊಸ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಪಿ-1913 (51, ಪುರುಷ) ಮಹಾರಾಷ್ಟ್ರದಿಂದ ಹಿಂದಿರುಗಿರುವ ಪ್ರಯಾಣದ ಹಿನ್ನೆಲೆ ಹೊಂದಿದ್ದಾರೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದ್ದಾರೆ.

ಧಾರವಾಡ: ಮಹಾರಾಷ್ಟ್ರದಿಂದ ಹಿಂದಿರುಗಿದ ಓರ್ವನಲ್ಲಿ ಕೊರೊನಾ ಸೋಂಕು ದೃಢ
ಪಿ-1913 (51, ಪುರುಷ) ಮಹಾರಾಷ್ಟ್ರ ರಾಜ್ಯದಿಂದ ಹಿಂದಿರುಗಿರುವ ಪ್ರಯಾಣದ ಹಿನ್ನೆಲೆ ಹೊಂದಿದ್ದಾರೆ. ಇವರು ಜಿಲ್ಲೆಗೆ ಬಂದ ಕೂಡಲೇ ಗಂಟಲು ದ್ರವ ಪರೀಕ್ಷೆಗೊಳಪಡಿಸಿ, ಸಾಂಸ್ಥಿಕ ಕ್ವಾರಂಟೈನ್ನಲ್ಲಿ ಇರಿಸಲಾಗಿತ್ತು. ಸದ್ಯ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ 34ಕ್ಕೆ ಏರಿಕೆಯಾಗಿದೆ. ಈಗಾಗಲೇ 9 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಉಳಿದವರು ಹುಬ್ಬಳ್ಳಿಯ ಕಿಮ್ಸ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.