ಧಾರವಾಡ: ನಗರದ ಯಾಲಕ್ಕಿ ಶೆಟ್ಟರ್ ಕಾಲೋನಿಯಲ್ಲಿ ಕೊರೊನಾ ಕೇಸ್ ಪತ್ತೆಯಾದ ಕಾಲೋನಿಯನ್ನು ಸೀಲ್ ಡೌನ್ ಮಾಡಿ ಜಿಲ್ಲಾಧಿಕಾರಿ ದೀಪಾ ಚೋಳನ್ ಆದೇಶ ಹೊರಡಿಸಿದ್ದಾರೆ.
ಕೊರೊನಾ ಪತ್ತೆ: ಧಾರವಾಡದ ಯಾಲಕ್ಕಿ ಶೆಟ್ಟರ್ ಕಾಲೋನಿ ಸೀಲ್ ಡೌನ್
ಯಾವುದೇ ವ್ಯಕ್ತಿ ಸೀಲ್ ಡೌನ್ ಆದೇಶ ಉಲ್ಲಂಘನೆ ಮಾಡದಂತೆ ಎಚ್ಚರಿಕೆ ನೀಡಲಾಗಿದ್ದು, ಆದೇಶ ಉಲ್ಲಂಘನೆ ಮಾಡಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ದೀಪಾ ಚೋಳನ್ ಎಚ್ಚರಿಕೆ ನೀಡಿದ್ದಾರೆ.
corona positive in Dharwad
ಬುಧವಾರ 36 ವರ್ಷದ ಮಹಿಳೆಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆ ಜಿಲ್ಲಾಧಿಕಾರಿ ದೀಪಾ ಚೋಳನ್ ಸೋಂಕಿತ ಮಹಿಳೆಯ ಮನೆಯ ಸುತ್ತ 200 ಮೀಟರ್ ಪ್ರದೇಶವನ್ನು ಬಫರ್ ಝೋನ್ ಎಂದು ಘೋಷಣೆ ಮಾಡಿದ್ದಾರೆ. ಸೋಂಕಿತ ಮಹಿಳೆಯು ಪಿ-5970 ಧಾರವಾಡದ ಯಾಲಕ್ಕಿ ಶೆಟ್ಟರ್ ಕಾಲೋನಿಯ ನಿವಾಸಿಯಾಗಿದ್ದಾರೆ.
ಯಾವುದೇ ವ್ಯಕ್ತಿ ಸೀಲ್ ಡೌನ್ ಆದೇಶ ಉಲ್ಲಂಘನೆ ಮಾಡದಂತೆ ಎಚ್ಚರಿಕೆ ನೀಡಲಾಗಿದ್ದು, ಆದೇಶ ಉಲ್ಲಂಘನೆ ಮಾಡಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ದೀಪಾ ಚೋಳನ್ ಎಚ್ಚರಿಕೆ ನೀಡಿದ್ದಾರೆ.