ಹುಬ್ಬಳ್ಳಿ: ಕನ್ನಡ ಪರ ಹೋರಾಟಗಾರರ ಬಗ್ಗೆ ರೋಲ್ ಕಾಲ್ ಹೋರಾಟಗಾರರು ಎಂದು ಹೇಳಿಕೆ ನೀಡಿದ್ದ ಶಾಸಕ ಅರವಿಂದ ಬೆಲ್ಲದ ಹಾಗೂ ಬಸವನಗೌಡ ಪಾಟೀಲ್ ಹೇಳಿಕೆಯನ್ನು ಖಂಡಿಸಿ ಪ್ರತಿಭಟನೆ ನಡೆಸಲಾಗಿದೆ.
ಅರವಿಂದ ಬೆಲ್ಲದ, ಯತ್ನಾಳ್ ವಿರುದ್ಧ ಕನ್ನಡಪರ ಸಂಘಟನೆಗಳ ಆಕ್ರೋಶ - ರೋಲ್ ಕಾಲ್ ಹೋರಾಟಗಾರರು ಎಂದು ಹೇಳಿಕೆ ನೀಡಿದ್ದ ಶಾಸಕ ಅರವಿಂದ ಬೆಲ್ಲದ
ರೋಲ್ ಕಾಲ್ ಹೋರಾಟಗಾರರು ಎಂದು ಹೇಳಿಕೆ ನೀಡಿದ್ದ ಶಾಸಕ ಅರವಿಂದ ಬೆಲ್ಲದ ಹಾಗೂ ಬಸವನಗೌಡ ಪಾಟೀಲ್ ವಿರುದ್ಧ ಕನ್ನಡ ಪರ ಹೋರಾಟಗಾರರು ಪ್ರತಿಭಟನೆ ನಡೆಸಿದರು.
![ಅರವಿಂದ ಬೆಲ್ಲದ, ಯತ್ನಾಳ್ ವಿರುದ್ಧ ಕನ್ನಡಪರ ಸಂಘಟನೆಗಳ ಆಕ್ರೋಶ outrage of Kannada organizations against MLA Arvind Bellada and Yatnala](https://etvbharatimages.akamaized.net/etvbharat/prod-images/768-512-9681220-thumbnail-3x2-nin.jpg)
ಶಾಸಕ ಅರವಿಂದ ಬೆಲ್ಲದ, ಯತ್ನಾಳ್ ವಿರುದ್ಧ ಕನ್ನಡಪರ ಸಂಘಟನೆಗಳ ಆಕ್ರೋಶ
ಶಾಸಕ ಅರವಿಂದ ಬೆಲ್ಲದ, ಯತ್ನಾಳ್ ವಿರುದ್ಧ ಕನ್ನಡಪರ ಸಂಘಟನೆಗಳ ಆಕ್ರೋಶ
ಹುಬ್ಬಳ್ಳಿಯ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿಂದು ಅರವಿಂದ ಬೆಲ್ಲದ ಹಾಗೂ ಬಸನಗೌಡ ಪಾಟೀಲ್ ಯತ್ನಾಳ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ಕನ್ನಡ ನಾಡು ನುಡಿ ಹೋರಾಟಕ್ಕಾಗಿ ಕನ್ನಡ ಪರ ಸಂಘಟನೆಗಳು ಹಾಗೂ ಹೋರಾಟಗಾರರು ಸಾಕಷ್ಟು ಹೋರಾಟಗಳನ್ನು ಮಾಡಿದ್ದಾರೆ. ನಾವೆಲ್ಲರೂ ಅಭಿವೃದ್ಧಿ ಬಯಸಿ ಹೋರಾಟ ಮಾಡಿದ್ದೇವೆ. ಆದರೆ, ಶಾಸಕ ಅರವಿಂದ ಬೆಲ್ಲದ ಹಾಗೂ ಯತ್ನಾಳ ತಮ್ಮ ಹೇಳಿಕೆ ಹಿಂಪಡೆಯಬೇಕು. ಕನ್ನಡ ಸಂಘಟನೆಗಳ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು.
ಹೆಚ್ಚಿನ ಓದಿಗಾಗಿ: ಕರ್ನಾಟಕ ಬಂದ್ ಕರೆಗೆ ಯತ್ನಾಳ್ ವಿರೋಧ
TAGGED:
ಹುಬ್ಬಳ್ಳಿ