ಹುಬ್ಬಳ್ಳಿ: ಹು-ಧಾ ಮಹಾನಗರ ವ್ಯಾಪ್ತಿಯಲ್ಲಿ ರಸ್ತೆ ಸಮಸ್ಯೆ ಹಾಗೂ ಸಾರ್ವಜನಿಕರಿಗೆ ಮೂಲಭೂತ ಸೌಕರ್ಯಗಳನ್ನು ಸರಿಯಾಗಿ ಒದಗಿಸಿಲ್ಲ ಎಂದು ಆರೋಪಿಸಿ ಹು-ಧಾ ಮಹಾನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಸಚಿವ ಜಗದೀಶ್ ಶೆಟ್ಟರ್ ಮನೆ ಹತ್ತಿರದ ರಸ್ತೆಯ ಗುಂಡಿಗಳಲ್ಲಿ ಭತ್ತದ ನಾಟಿ ಮಾಡುವ ಮೂಲಕ ಪ್ರತಿಭಟನೆ ನಡೆಸಲಾಯಿತು.
ಶೆಟ್ಟರ್ ನಿವಾಸದ ಬಳಿಯ ರಸ್ತೆಯಲ್ಲಿ ಭತ್ತದ ನಾಟಿ ಮಾಡಿ ಕೈ ಕಾರ್ಯಕರ್ತರಿಂದ ಪ್ರತಿಭಟನೆ - different protest
ಹು-ಧಾ ಮಹಾನಗರ ವ್ಯಾಪ್ತಿಯಲ್ಲಿ ರಸ್ತೆ ಸಮಸ್ಯೆ ಹಾಗೂ ಸಾರ್ವಜನಿಕರಿಗೆ ಮೂಲಭೂತ ಸೌಕರ್ಯಗಳನ್ನು ಸರಿಯಾಗಿ ಒದಗಿಸಿಲ್ಲ ಎಂದು ಆರೋಪಿಸಿ ಜಗದೀಶ್ ಶೆಟ್ಟರ್ ಮನೆ ಹತ್ತಿರದ ರಸ್ತೆಯ ಗುಂಡಿಗಳಲ್ಲಿ ಭತ್ತದ ನಾಟಿ ಮಾಡುವ ಮೂಲಕ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
![ಶೆಟ್ಟರ್ ನಿವಾಸದ ಬಳಿಯ ರಸ್ತೆಯಲ್ಲಿ ಭತ್ತದ ನಾಟಿ ಮಾಡಿ ಕೈ ಕಾರ್ಯಕರ್ತರಿಂದ ಪ್ರತಿಭಟನೆ ರಸ್ತೆಯಲ್ಲಿ ಭತ್ತದ ನಾಟಿ ಮಾಡಿದ ಕೈ ಮುಖಂಡರು](https://etvbharatimages.akamaized.net/etvbharat/prod-images/768-512-8561567-177-8561567-1598426094115.jpg)
ರಾಜ್ಯದ ಎರಡನೇ ಅತಿ ದೊಡ್ಡ ಮಹಾನಗರ ಪಾಲಿಕೆ ಎಂಬ ಹೆಗ್ಗಳಿಕೆ ಪಾತ್ರವಾಗಿರುವ ಹುಬ್ಬಳ್ಳಿ-ಧಾರವಾಡ ಅವಳಿನಗರದಲ್ಲಿ ಎಲ್ಲೆಂದರಲ್ಲಿ ರಸ್ತೆಗಳು ಗುಂಡಿ ಬಿದ್ದು, ಸಾರ್ವಜನಿಕರು ಸಾಕಷ್ಟು ಸಮಸ್ಯೆ ಅನುಭವಿಸುತ್ತಿದ್ದಾರೆ. ರಸ್ತೆಗಳು ಕೆಸರು ಗದ್ದೆಗಳಾಗಿವೆ. ಇಂತಹ ಹಲವಾರು ಸಮಸ್ಯೆಗಳು ತಲೆದೋರಿದ್ದರೂ ಕೂಡ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಕೈ ಕಟ್ಟಿ ಕುಳಿತಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಸುಳ್ಳು ಆಶ್ವಾಸನೆ ನೀಡಿ ಶೆಟ್ಟರ್ ಅಧಿಕಾರದ ಗದ್ದುಗೆ ಹಿಡಿದಿದ್ದಾರೆ. ಯಾವುದೇ ಅಭಿವೃದ್ಧಿ ಕಾರ್ಯ ಮಾಡಿಲ್ಲ. ಕೂಡಲೇ ಶೆಟ್ಟರ್ ಅವರು ನಗರದ ರಸ್ತೆಗಳನ್ನು ದುರಸ್ತಿ ಮಾಡಿಸುವಂತೆ ಒತ್ತಾಯಿಸಿದರು.