ಹುಬ್ಬಳ್ಳಿ :ನಗರದ ಕಿಮ್ಸ್ ಆಸ್ಪತ್ರೆಯ ಎರಡನೇ ಮಹಡಿಯ ಮೇಲೆ ಪೇಂಟಿಂಗ್ ಕೆಲಸ ಮಾಡುತ್ತಿದ್ದ ವ್ಯಕ್ತಿ ಆಯತಪ್ಪಿ ಬಿದ್ದು ದಾರುಣವಾಗಿ ಸಾವನ್ನಪ್ಪಿದ್ದಾನೆ.
ಧಾರವಾಡ ನಿವಾಸಿ ರಾಘವೇಂದ್ರ ಮೃತ ವ್ಯಕ್ತಿ. ಈತ ಕಳೆದೊಂದು ವಾರದಿಂದ ಕಿಮ್ಸ್ ಕಟ್ಟಡಕ್ಕೆ ಬಣ್ಣ ಹಚ್ಚುವ ಕೆಲಸ ಮಾಡುತ್ತಿದ್ದ. ಕೂಡಾ ಎಂದಿನಂತೆ ಕಾರ್ಯ ನಿರ್ವಹಿಸುತ್ತಿದ್ದ ವೇಳೆ ಆಯತಪ್ಪಿ ಕಟ್ಟಡದಿಂದ ಕೆಳಗೆ ಬಿದ್ದಿದ್ದಾನೆ. ತಕ್ಷಣ ಈತನನ್ನು ಸಿಬ್ಬಂದಿ ತುರ್ತು ಚಿಕಿತ್ಸೆ ಘಟಕಕ್ಕೆ ದಾಖಲು ಮಾಡಿದರಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.