ಧಾರವಾಡ: ಕೊರೊನಾ ವೈರಸ್ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಒಂದಲ್ಲ ಒಂದು ರೀತಿಯಲ್ಲಿ ಜಾಗೃತಿ ಕೆಲಸಗಳು ನಡೆಯುತ್ತಿವೆ. ಇದೀಗ ಹುಬ್ಬಳ್ಳಿ-ಧಾರವಾಡ ಪಾಲಿಕೆ ಸಿಬ್ಬಂದಿಯೊಬ್ಬರು ತಾವು ಕೆಲಸ ನಿರ್ವಹಿಸುವ ವ್ಯಾಪ್ತಿಯ ಸಲೂನ್ ಅಂಗಡಿಗಳಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ.
ಸಲೂನ್ಗಳಿಗೆ ಸ್ವಂತ ಹಣದಲ್ಲಿ ಮಾಸ್ಕ್, ಸ್ಯಾನಿಟೈಸರ್ ವಿತರಿಸುತ್ತಿರುವ ಪಾಲಿಕೆ ಸಿಬ್ಬಂದಿ - Hubballi District Administration
ಹುಬ್ಬಳ್ಳಿ-ಧಾರವಾಡದಲ್ಲಿ ಕೊರೊನಾ ಹೆಚ್ಚುತ್ತಿರುವ ಹಿನ್ನೆಲೆ ಪಾಲಿಕೆ ವ್ಯಾಪ್ತಿಯಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ಕೆ ಪಾಲಿಕೆ ಸಿಬ್ಬಂದಿ ಮುಂದಾಗಿದ್ದಾರೆ. ತಮ್ಮ ಸ್ವಂತ ಹಣದಲ್ಲಿ ಸಲೂನ್ ಅಂಗಡಿಗಳಿಗೆ ಮಾಸ್ಕ್, ಸ್ಯಾನಿಟೈಸರ್ ಮುಂತಾದ ಸಲಕರಣೆ ನೀಡಿ ನೆರವಾಗುವ ಕಾರ್ಯ ಮಾಡಿದ್ದಾರೆ.

ಸಲೂನ್ಗಳಿಗೆ ಸ್ವಂತ ಹಣದಲ್ಲಿ ಮಾಸ್ಕ್, ಸ್ಯಾನಿಟೈಸರ್ ವಿತರಿಸುತ್ತಿರುವ ಪಾಲಿಕೆ ಸಿಬ್ಬಂದಿ
ಸಲೂನ್ಗಳಿಗೆ ಸ್ವಂತ ಹಣದಲ್ಲಿ ಮಾಸ್ಕ್, ಸ್ಯಾನಿಟೈಸರ್ ವಿತರಿಸುತ್ತಿರುವ ಪಾಲಿಕೆ ಸಿಬ್ಬಂದಿ
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಕಸ ಸಂಗ್ರಹಿಸುವ ವಾಹನದ ಚಾಲಕ ಮಲ್ಲಪ್ಪ ಯಮೋಜಿ ಇದೀಗ ಕೊರೊನಾ ಜಾಗೃತಿ ಕೆಲಸಗಳನ್ನು ಮಾಡಿ, ಕಲ್ಯಾಣನಗರದಲ್ಲಿ ಮನೆ ಮಾತಾಗಿದ್ದಾರೆ.
ಇದೀಗ ಕೊರೊನಾ ಆತಂಕ ಜಿಲ್ಲೆಯಲ್ಲಿ ಮನೆಮಾಡಿದೆ. ಇದರಿಂದ ತಾವು ಕೆಲಸ ಮಾಡುವ ವ್ಯಾಪ್ತಿಯಲ್ಲಿ ಸಲೂನ್ ಅಂಗಡಿಗಳಿಗೆ ಮಾಸ್ಕ್, ಸ್ಯಾನಿಟೈಸರ್ ಹಾಗೂ ಗ್ಲೌಸ್ಗಳನ್ನು ಸ್ವಂತ ಖರ್ಚಿನಲ್ಲಿ ನೀಡಿ ಸಾಮಾಜಿಕ ಅಂತರ ಕಾಪಾಡಿಕೊಳ್ಳುವಂತೆ ಸಲೂನ್ ಅಂಗಡಿಗಳ ಸಿಬ್ಬಂದಿಗೆ ಮನವಿ ಮಾಡಿ ಜಾಗೃತಿ ಮೂಡಿಸುತ್ತಿದ್ದಾರೆ.