ಧಾರವಾಡ: ಬಹು ಅಂಗಾಗ ವೈಫಲ್ಯದಿಂದ ಬಳಲುತಿದ್ದ ನಾಡೋಜ ಪಾಟೀಲ ಪುಟ್ಟಪ್ಪ ಅವರು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ನಿನ್ನೆ ರಾತ್ರಿ ನಿಧನರಾಗಿದ್ದು, ಮಧ್ಯಾಹ್ನ 12 ಗಂಟೆಯಿಂದ ಅರ್ಧಗಂಟೆ ಕಾಲ ಧಾರವಾಡ ವಿದ್ಯಾವರ್ಧಕ ಸಂಘದಲ್ಲಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಪಾಪು ಪುತ್ರ ಅಶೋಕ ಪಾಟೀಲ್ ತಿಳಿಸಿದ್ದಾರೆ.
ಹುಬ್ಬಳ್ಳಿಯ ಮನೆಯಲ್ಲಿ ಇಂದು ಬೆಳಗ್ಗೆ 9 ರಿಂದ 12 ಗಂಟೆ ವರೆಗೂ ಸಾರ್ವಜನಿಕರ ದರ್ಶನಕ್ಕೆ ಪಾರ್ಥಿವ ಶರೀರವನ್ನು ಇಡಲಾಗುವುದು. ಮಧ್ಯಾಹ್ನ 12 ಗಂಟೆಯಿಂದ ಅರ್ಧಗಂಟೆ ಕಾಲ ಧಾರವಾಡ ವಿದ್ಯಾವರ್ಧಕ ಸಂಘದಲ್ಲಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು. ನಂತರ ಅವರ ಅಂತ್ಯ ಸಂಸ್ಕಾರ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ. ಸ್ವಗ್ರಾಮ ಹಲಗೇರಿಯಲ್ಲಿ ಅಂತ್ಯ ಸಂಸ್ಕಾರ ನೆರವೇರಿಸಲಾಗುವುದು ಎಂದು ಪಾಪು ಅವರ ಪುತ್ರ ಅಶೋಕ ಪಾಟೀಲ್ ತಿಳಿಸಿದ್ದಾರೆ.