ಕರ್ನಾಟಕ

karnataka

ETV Bharat / state

ಆಸ್ಪತ್ರೆಗೆ ದಾಖಲಾಗಿರುವ ಸಾಹಿತಿ ಪಾಪು ಆರೋಗ್ಯ ವಿಚಾರಿಸಿದ ಶಿವಾಚಾರ್ಯ ಮಹಾಸ್ವಾಮಿಗಳು - ಪಾಟೀಲ್ ಪುಟ್ಟಪ್ಪ ಅವರು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ

ಹಿರಿಯ ಪತ್ರಕರ್ತ ಹಾಗೂ ಸಾಹಿತಿ ಪಾಟೀಲ್ ಪುಟ್ಟಪ್ಪ ಅನಾರೋಗ್ಯದಿಂದ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಬೃಹನ್ಮಠದ ಡಾ. ಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ಶಿವಾಚಾರ್ಯ ಮಹಾಸ್ವಾಮಿಗಳು
ಶಿವಾಚಾರ್ಯ ಮಹಾಸ್ವಾಮಿಗಳು

By

Published : Feb 22, 2020, 8:46 PM IST

ಹುಬ್ಬಳ್ಳಿ:ಹಿರಿಯ ಪತ್ರಕರ್ತ ಹಾಗೂ ಸಾಹಿತಿ ಪಾಟೀಲ್ ಪುಟ್ಟಪ್ಪ ಅನಾರೋಗ್ಯದಿಂದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸಿರಿಗೆರೆಯ ತರಳಬಾಳು ಜಗದ್ಗುರು ಬೃಹನ್ಮಠದ ಡಾ. ಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ಕಳೆದ ಹಲವು ದಿನಗಳಿಂದ ಪಾಟೀಲ್ ಪುಟ್ಟಪ್ಪ ಅವರು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಡಾ. ಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು ಆಸ್ಪತ್ರೆಗೆ ಭೇಟಿ ಆರೋಗ್ಯ ವಿಚಾರಿಸಿದರು.

ಸಾಹಿತಿ ಪಾಟೀಲ್ ಪುಟ್ಟಪ್ಪರ ಆರೋಗ್ಯ ವಿಚಾರಿಸಿದ ಸ್ವಾಮೀಜಿಗಳು

ಪಾಪು ಅವರ ಆರೋಗ್ಯದ ಕುರಿತ ಮಾಹಿತಿಯನ್ನು ಕಿಮ್ಸ್ ನಿರ್ದೇಶಕರಿಂದ ಪಡೆದುಕೊಂಡರು. ಪಾಪು ಶ್ವಾಸಕೋಶ, ಉಸಿರಾಟ ಹಾಗೂ ವಯೋಸಹಜ ತೊಂದರೆಯಿಂದ ಬಳಲುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ.

ABOUT THE AUTHOR

...view details