ಹುಬ್ಬಳ್ಳಿ:ಭಾರತ - ಚೀನಾ ಗಡಿಯಲ್ಲಿ ಹುತಾತ್ಮರಾದ ಭಾರತೀಯ ಸೇನೆಯ ವೀರ ಯೋಧರಿಗೆ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ನಗರದ ದುರ್ಗದ್ ಬೈಲ್ ವೃತ್ತದಲ್ಲಿ ಮೇಣದ ಬತ್ತಿ ಬೆಳಗಿ ಶ್ರದ್ಧಾಂಜಲಿ ಸಲ್ಲಿಸಿದರು.
ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಅರ್ಪಿಸಿದ ಆಮ್ ಆದ್ಮಿ ಪಕ್ಷ - hubli
ಭಾರತ - ಚೀನಾ ಗಡಿಯಲ್ಲಿ ಹುತಾತ್ಮರಾದ ಭಾರತೀಯ ಸೇನೆಯ ವೀರ ಯೋಧರಿಗೆ ಹುಬ್ಬಳ್ಳಿಯ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಶ್ರದ್ಧಾಂಜಲಿ ಸಲ್ಲಿಸಿದರು.
ಆಮ್ ಆದ್ಮಿ ಪಕ್ಷದ ಕಾರ್ಯಕರ್ತರಿಂದ ಶ್ರದ್ಧಾಂಜಲಿ
ಲಡಾಖ್ನ ಗಾಲ್ವಾನ್ ಕಣಿವೆಯಲ್ಲಿ ಭಾರತ ಮತ್ತು ಚೀನಾ ನಡುವೆ ಸಂಘರ್ಷ ಏರ್ಪಟ್ಟಿದ್ದು, ಈ ವೇಳೆ ಭಾರತೀಯ 20 ಸೈನಿಕರು ಮೃತಪಟ್ಟಿದ್ದರು. ಸೈನಿಕರ ಸಾವು ನಮಗೆಲ್ಲ ದೊಡ್ಡ ಆಘಾತವನ್ನು ಉಂಟು ಮಾಡಿದೆ ಎಂದು ಬೇಸರ ವ್ಯಕ್ತ ಪಡಿಸಿದರು.
ಮೈ ಕೊರೆಯುವ ಚಳಿಯಲ್ಲೂ ತಮ್ಮ ಪ್ರಾಣದ ಹಂಗು ತೊರೆದು ತಾಯ್ನಾಡಿಗಾಗಿ ಯೋಧರು ಹೋರಾಡುತ್ತಿದ್ದಾರೆ. ಮೃತಪಟ್ಟ 20 ಯೋಧರ ಆತ್ಮಕ್ಕೆ ಶಾಂತಿ ಸಿಗಲೆಂದು ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಪಾರ್ಥನೆ ಸಲ್ಲಿಸಿದರು.