ಧಾರವಾಡ:ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಲ್ಲಿ ಮಾಡಿದ ಕೆಲಸದ ಬಿಲ್ ಮಾಡಲು ಲಂಚಕ್ಕೆ ಬೇಡಿಕೆಯಿಟ್ಟಿದ್ದ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿ(ಪಿಡಿಒ) ಎಸಿಬಿ ಕೈಗೆ ಸಿಕ್ಕಿಬಿದ್ದಿದ್ದಾರೆ.
ಧಾರವಾಡ ತಾಲೂಕಿನ ದೇವರಹುಬ್ಬಳ್ಳಿ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಮಹ್ಮದ ಯೂಸೂಫ್ ಅಬ್ದುಲ್ ಮುಜೀಬ ಚಕ್ಕೋಲಿ ಎಂಬುವವರನ್ನು ಅಧಿಕಾರಿಗಳು ಟ್ರ್ಯಾಪ್ ಮಾಡಿದ್ದಾರೆ. ದೇವರ ಹುಬ್ಬಳ್ಳಿ ಗ್ರಾಮದ ಶಿವಾಜಿ ಮಹದೇವಪ್ಪ ಆರೇರ ಅವರ ಹಣಕ್ಕೆ ಬಿಲ್ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದರು.