ಹುಬ್ಬಳ್ಳಿ:ಇಲ್ಲಿನ ಛಬ್ಬಿ ಗ್ರಾಮದ ಶಾಲಾ ಮಕ್ಕಳನ್ನು ಬಸ್ನಲ್ಲಿ ಹತ್ತಿಸಿಕೊಂಡು ಹೋಗಿಲ್ಲ ಎಂಬ ಕಾರಣಕ್ಕೆ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕನ ಮೇಲೆ ಹಲ್ಲೆ ಮಾಡಿರುವ ಘಟನೆ ತಾಲೂಕಿನ ಛಬ್ಬಿ ಕ್ರಾಸ್ ಬಳಿ ನಡೆದಿದೆ.
ಶಾಲಾ ಮಕ್ಕಳನ್ನು ಹತ್ತಿಸಿಕೊಳ್ಳದ ಬಸ್ ಚಾಲಕನಿಗೆ ಗ್ರಾಮಸ್ಥರು ಏನ್ ಮಾಡಿದ್ರು ಗೊತ್ತಾ? ವಿಡಿಯೋ ನೋಡಿ - ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ
ಹುಬ್ಬಳ್ಳಿಯ ಛಬ್ಬಿ ಗ್ರಾಮದಲ್ಲಿ ಶಾಲಾ ಮಕ್ಕಳನ್ನು ಬಸ್ ಚಾಲಕ ಹತ್ತಿಸಿಕೊಂಡಿಲ್ಲ ಎಂಬ ಕಾರಣಕ್ಕೆ ಗ್ರಾಮಸ್ಥರು ಆತನ ಮೇಲೆ ಹಲ್ಲೆ ಮಾಡಿದ್ದಾರೆ. ಹಲ್ಲೆಯಲ್ಲಿ ಗಾಯಗೊಂಡ ಚಾಲನನ್ನು ಯಲಿವಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಎಂ.ಕೆ. ಸಜ್ಜನ ಹಲ್ಲೆಗೊಳಗಾದ ಚಾಲಕ. ಅಲ್ಲದೇ ಬಸ್ನಲ್ಲಿ ಸುಮಾರು 90ಕ್ಕೂ ಹೆಚ್ಚು ಪ್ರಯಾಣಿಕರಿದ್ದು, ಮಕ್ಕಳನ್ನು ಹತ್ತಿಸಿಕೊಳ್ಳಲು ಬಸ್ಸಿನಲ್ಲಿ ಸ್ಥಳಾವಕಾಶ ಇಲ್ಲದಿರುವ ಹಿನ್ನೆಲೆಯಲ್ಲಿ ಮಕ್ಕಳನ್ನು ಹತ್ತಿಸಿಕೊಳ್ಳಲು ಸಾಧ್ಯವಾಗಿಲ್ಲ. ಆದರೆ ಇದರ ಬಗ್ಗೆ ಅರ್ಥೈಸಿಕೊಳ್ಳದ ಗ್ರಾಮಸ್ಥರು, ಚಾಲಕನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ನಿರ್ವಾಹಕರು ತಿಳಿಸಿದ್ದಾರೆ.
ರಸ್ತೆಯೂ ಸಂಪೂರ್ಣವಾಗಿ ಹದಗೆಟ್ಟಿದ್ದು, ಬಸ್ ತನ್ನ ಸಾಮರ್ಥ್ಯಕ್ಕೆ ಮೀರಿ ಹೆಚ್ಚು ಪ್ರಯಾಣಿಕರನ್ನು ಸಾಗಿಸುತ್ತಿದ್ದು, ಮಕ್ಕಳು ನಿಲ್ಲಲೂ ಕೂಡ ಯಾವುದೇ ಸ್ಥಳಾವಕಾಶ ಇರಲಿಲ್ಲ. ಹಾಗಾಗಿ ಮಕ್ಕಳನ್ನು ಬಿಟ್ಟು ಬರಲಾಗಿದೆ. ಮೊದಲಿಗೆ ಮಾತಿನ ಚಕಮಕಿ ಏರ್ಪಟ್ಟಿದ್ದು, ನಂತರ ಗ್ರಾಮಸ್ಥರು ಚಾಲಕನ ಮೇಲೆ ಹಲ್ಲೆ ಮಾಡಿದ್ದಾರೆ. ಈ ಹಲ್ಲೆಯ ದೃಶ್ಯ ಪ್ರಯಾಣಿಕರೊಬ್ಬರ ವಿಡಿಯೋದಲ್ಲಿ ಸೆರೆಯಾಗಿದೆ. ಹಲ್ಲೆಯಲ್ಲಿ ಗಾಯಗೊಂಡ ಚಾಲನನ್ನು ಯಲಿವಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.